ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ ಪೂರೈಕೆಗೆ ಆಗ್ರಹ

Last Updated 13 ಏಪ್ರಿಲ್ 2022, 3:47 IST
ಅಕ್ಷರ ಗಾತ್ರ

ಮುಳಬಾಗಿಲು: ಕೃಷಿ ಕ್ಷೇತ್ರಕ್ಕೆ ಅವಶ್ಯಕತೆಯಿರುವ ರಸಗೊಬ್ಬರ ಪೂರೈಕೆ ಮಾಡಬೇಕು. ಕೃತಕ ಅಭಾವ ಸೃಷ್ಟಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ತಾಲ್ಲೂಕಿನ ಕಸಬಾ ಹೋಬಳಿಯ ಎನ್. ವಡ್ಡಹಳ್ಳಿ ವೃತ್ತದಲ್ಲಿ ತರಕಾರಿ ಸಮೇತ ಮಂಗಳವಾರ ಪ್ರತಿಭಟನೆ ನಡೆಯಿತು.

ದೇಶಕ್ಕೆ ಅನ್ನ ಹಾಕುವ ಅನ್ನದಾತನ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಅಧಿಕಾರದ ಚುಕ್ಕಾಣಿ ಹಿಡಿಯುವಾಗ ಹಸಿರು ವಸ್ತ್ರಧರಿಸಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ರೈತರೇ ದೇಶದ ಬೆನ್ನೆಲುಬು ಎನ್ನುತ್ತಾರೆ. ಆ ನಂತರ ಅವರ ಬೆನ್ನುಮೂಳೆ ಮುರಿಯುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಾರೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಟೀಕಿಸಿದರು.

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಕೃಷಿ ಕ್ಷೇತ್ರಕ್ಕೆ ಅವಶ್ಯಕವಾಗಿ ಬೇಕಾಗಿರುವ ರಸಗೊಬ್ಬರದ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಆದರೆ, ರಸಗೊಬ್ಬರ ಕಂಪನಿ ಮಾಲೀಕರು ಹಿಂಬದಿಯಿಂದ ಅಭಾವ ಸೃಷ್ಟಿಸುತ್ತಿದ್ದಾರೆ. ಒಂದು ಮೂಟೆ ಗೊಬ್ಬರ ಕೊಳ್ಳಬೇಕಾದರೆ ಅದಕ್ಕೆ ಪರ್ಯಾಯವಾಗಿ ಡ್ರಿಪ್ ಅಥವಾ ಔಷಧಿ ಖರೀದಿ ಮಾಡುವ ಷರತ್ತು ವಿಧಿಸಿದ್ದಾರೆ ಎಂದು ದೂರಿದರು.

ಉಪ ತಹಶೀಲ್ದಾರ್ ವೆಂಕಟೇಶಪ್ಪಮನವಿ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಹಸಿರು ಸೇನೆ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್, ಕಿಶೋರ್, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ವೇಣು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT