ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು | ಆರೋಗ್ಯ ಏರುಪೇರು: ಬಿಎಂಟಿಸಿ ಚಾಲಕ ಸಾವು

Published 22 ಜೂನ್ 2024, 15:47 IST
Last Updated 22 ಜೂನ್ 2024, 15:47 IST
ಅಕ್ಷರ ಗಾತ್ರ

ಮುಳಬಾಗಿಲು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಚಾಲಕ ಹಾಗೂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಂ.ಆನಂದ್ (45) ಆರೋಗ್ಯದಲ್ಲಿ ಏರುಪೇರಾಗಿ ಶನಿವಾರ ಸಾವನ್ನಪ್ಪಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಬಂಡಾರಹಳ್ಳಿ ಗ್ರಾಮದ ಆನಂದ್, ಬೆಂಗಳೂರಿನ ಇಂದಿರಾನಗರದ ಬಿಎಂಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದ ಕಾರಣ ಶುಕ್ರವಾರ ಸಂಜೆ ಬಂಡಾರಹಳ್ಳಿ ಗ್ರಾಮದಿಂದ ಹೊರ ಹೋದವರು ರಾಷ್ಟ್ರೀಯ ಹೆದ್ದಾರಿ 75ರ ದೇವರಾಯ ಸಮುದ್ರ ಟೋಲ್ ಸಮೀಪ ಆರೋಗ್ಯ ಸಮಸ್ಯೆಯಿಂದ ಮೃತ ಪಟ್ಟಿದ್ದಾರೆ ಎಂದು ಮೃತರ ಪತ್ನಿ ತ್ರಿವೇಣಿ ದೂರಿನಲ್ಲಿ ತಿಳಿಸಿದ್ದಾರೆ.

ಮೃತರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT