ಪರಿಸರ ರಕ್ಷಣೆಗೆ ಸಂಕಲ್ಪ ಮಾಡಿ

7
1,400 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಪರಿಸರ ರಕ್ಷಣೆಗೆ ಸಂಕಲ್ಪ ಮಾಡಿ

Published:
Updated:
Deccan Herald

ಕೋಲಾರ: ‘ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಪ್ರತಿಯೊಬ್ಬರು ಸಂಕಲ್ಪ ಮಾಡಬೇಕು’ ಎಂದು ಯುವ ಶಕ್ತಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಶಿವಪ್ರಕಾಶ್‌ ರೆಡ್ಡಿ ಕೋರಿದರು.

ತಾಲ್ಲೂಕಿನ ಕ್ಯಾಲನೂರು ಗ್ರಾಮದಲ್ಲಿ ಭಾನುವಾರ ಯುವ ಶಕ್ತಿ ಸಂಘಟನೆಯಿಂದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಯೋಜನೆಯ ಅಂಗವಾಗಿ ಹಮ್ಮಿಕೊಂಡಿದ್ದ 1,400 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಮನುಷ್ಯನ ಅತಿ ಆಸೆಗೆ ಪರಿಸರವನ್ನು ನಾಶ ಮಾಡಿ ಈಗ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ಮುಂದಿನ ಪೀಳಿಗೆ ಈ ಪರಿಸ್ಥಿತಿ ಮುಂದುವರೆಯದಂತೆ ಮುಂಜಾಗ್ರತೆವಹಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.

‘ಗಿಡ ಮರಗಳ ನಾಶದಿಂದ ಅಂತ್ಜಲಮಟ್ಟ ಪತಾಳಕ್ಕೆ ಕುಸಿದಿದೆ. ಬಯಲು ಸೀಮೆ ಜಿಲ್ಲೆಯಲ್ಲಿ ಮರಗಳನ್ನು ಬೆಳೆಸದಿದ್ದರೆ ಮುಂದೆ ಜೀವನ ನಡೆಸುವುದು ಕಷ್ಟಕರವಾಗಲಿದೆ. ಅದಕ್ಕಾಗಿ ಸಸಿ ನೆಡುವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದಕ್ಕೆ ಸಾರ್ವಜಕರು ಸಹಕರಿಸಬೇಕು’ ಎಂದು ಕೋರಿದರು.

‘ಮಾನವನ ದಾಳಿಯಿಂದ ಅರಣ್ಯದಲ್ಲಿನ ಮರಗಳು ನಾಶವಾಗುತ್ತಿದೆ. ಇದರಿಂದಾಗಿ ಹಸಿರು ಕ್ರಾಂತಿ ನಿರ್ಮಾಣ ಮಾಡಬೇಕಾದ ಅಗತ್ಯವಿದೆ. ಇಲ್ಲವಾದರೆ ಮುಂದಿನ ಪೀಳಿಗೆಯ ಬೆಳವಣಿಗೆಗೆ ತೊಂದರೆ ಎದುರಾಗುತ್ತದೆ. ಗ್ರಾಮೀಣ ಭಾಗದ ಜನಕ್ಕೆ ಪರಿಸರ ರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಾಗ ಅಗತ್ಯವಿದೆ’ ಎಂದು ಹೇಳಿದರು.

‘ಮರಗಳ ನಾಶದಿಂದ ಸಕಾಲಕ್ಕೆ ಮಳೆಯಾಗುತ್ತಿಲ್ಲ. ಇದರಿಂದಾಗಿ ಬರಪಸ್ಥಿತಿ ಎದುರಾಗಿದ್ದು ರೈತರು ಕೃಷಿ ಚಟುವಟಿಕೆಗಳಿಂದ ದೂರಸರಿಯುತ್ತಿದ್ದಾರೆ. ಸಕಾಲಕ್ಕೆ ಮಳೆಯಾಗುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಎಚ್ಚರಿಸಿದರು.

‘ದಿನೇದಿನೇ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದ್ದು ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗಿಡಮರಗಳನ್ನು ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸಸಿ ನೆಡುವ ಕಾರ್ಯಕ್ರಮವನ್ನು ಯಾರ ಸ್ವಾರ್ಥಕ್ಕೂ ಹಮ್ಮಿಕೊಂಡಿರುವುದಲ್ಲ’ ಎಂದು ಹೇಳಿದರು.

ಯುವಶಕ್ತಿ ಸಂಘಟನೆಯ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿಗಳಾದ ಸುಬ್ಬು, ಸುರೇಶ್, ವಿಜಯ ಬಾವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಪುಟ್ಟರಾಜು, ಪದಾಧಿಕಾರಿಗಳಾದ ಬಾಬು ರೆಡ್ಡಿ, ಪ್ರಭಾಕರ್, ನಾಗಭೂಷಣ್, ಲಕ್ಷಿಕಾಂತ್, ಜಯರಾಂ, ನವೀನ್, ಮಂಜುನಾಥ್, ನಗರಸಭೆ ಮಾಜಿ ಸದಸ್ಯ ತ್ಯಾಗರಾಜ್, ನೀರಾವರಿ ಹೋರಟ ಸಮಿತಿಯ ಸಂಚಾಲಕ ವಿ.ಕೆ.ರಾಜೇಶ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !