ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ ಸಂಸ್ಥೆ ನೆರವು ಶ್ಲಾಘನೀಯ

Last Updated 9 ನವೆಂಬರ್ 2020, 16:05 IST
ಅಕ್ಷರ ಗಾತ್ರ

ಕೋಲಾರ: ‘ಬಡ ಮಕ್ಕಳ ಶಿಕ್ಷಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಹಣಕಾಸು ನೆರವು ನೀಡುತ್ತಿರುವುದು ಶ್ಲಾಘನೀಯ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ಕಚೇರಿಯಲ್ಲಿ ‘ಜ್ಞಾನ ತಾಣ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಮತ್ತು ಟ್ಯಾಬ್ ವಿತರಿಸಿ ಮಾತನಾಡಿದರು.

‘ಕೋವಿಡ್‌ ಕಾರಣಕ್ಕೆ ಬಡ ಮಕ್ಕಳು ಆನ್‌ಲೈನ್‌ ತರಗತಿಗಳಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ರಿಯಾಯಿತಿ ದರದಲ್ಲಿ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ನೀಡುತ್ತಿರುವುದು ಹೆಮ್ಮೆಯ ವಿಚಾರ’ ಎಂದು ಸ್ಮರಿಸಿದರು.

‘ರಾಜ್ಯದೆಲ್ಲೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಾರ್ವಜನಿಕ ಜೀವನದಲ್ಲಿ ಪ್ರತಿಯೊಬ್ಬರ ಅಗತ್ಯಕ್ಕೆ ತಕ್ಕಂತೆ ವಿವಿಧ ಕಾರ್ಯಕ್ರಮ ರೂಪಿಸಿ ಗ್ರಾಮೀಣ ಭಾಗಕ್ಕೆ ವಿಸ್ತರಿಸಿದೆ. ಸಂಸ್ಥೆಯ ಈ ಕಾರ್ಯ ಮಾದರಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಜಿಲ್ಲೆಯಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಸೇವಾ ಕಾರ್ಯ ನಡೆಸುತ್ತಿದೆ. ಸಂಸ್ಥೆಯ ಕಾರ್ಯಕ್ರಮಗಳು ಮನೆ ಮಾತಾಗಿವೆ. ಕೋವಿಡ್‌ ಸಂಕಷ್ಟದ ಪರಿಸ್ಥಿತಿಯಲ್ಲಿ ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಹೇಳಿದರು.

‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈನೋದ್ಯಮ ನಂಬಿ ಜೀವನ ಸಾಗಿಸುತ್ತಿದ್ದಾರೆ. ಈ ರೈತರ ಅನುಕೂಲಕ್ಕಾಗಿ ಹಾಲಿನ ಡೇರಿ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ₹ 1 ಲಕ್ಷ ನೀಡುತ್ತಿದೆ’ ಎಂದರು.

ಸ್ವಾಗಾತಾರ್ಹ: ‘ಸ್ಥಿತಿವಂತರ ಮಕ್ಕಳು ಖಾಸಗಿ ಶಾಲೆಗಳಿಗೆ ದಾಖಲಾಗುತ್ತಿದ್ದಾರೆ. ಬಡ ಮಕ್ಕಳು ಆರ್ಥಿಕ ಸಮಸ್ಯೆಯ ಕಾರಣಕ್ಕೆ ಖಾಸಗಿ ಶಾಲೆಗಳಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಇಂತಹ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಸೌಲಭ್ಯ ನೀಡುತ್ತಿರುವುದು ಸ್ವಾಗಾತಾರ್ಹ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಚಂದ್ರಶೇಖರ್, ಮೇಲ್ವಿಚಾರಕ ಹರೀಶ್, ತಾಲ್ಲೂಕು ಕೃಷಿ ಅಧಿಕಾರಿ ವಿಜಯ್‌ಕುಮಾರ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT