ಕೋಲಾರ: ‘ಮುಳಬಾಗಿಲು ತಾಲ್ಲೂಕಿನ ಅಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್‌ಕುಮಾರ್ ಹಾಗೂ ಅಲ್ಲಿನ ಗ್ರಾಮಸ್ಥರು ನೀರು ಸರಬರಾಜು ವಿಚಾರದಲ್ಲಿ ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಜಲಗಾರ ಬಿ.ವಿ.ಗಂಗಾಧರ್ ಆರೋಪಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾನು ದುಗ್ಗಸಂದ್ರ ಹೋಬಳಿ ವ್ಯಾಪ್ತಿಯ ಅಗರ ಗ್ರಾ.ಪಂ ಜಲಗಾರನಾಗಿ ಕೆಲಸ ಮಾಡುತ್ತಿದ್ದೇನೆ. ವೈಯಕ್ತಿಕ ವಿಚಾರಕ್ಕೆ ಅಲ್ಲಿನ ಪಿಡಿಒ ಹಾಗೂ ಜನರು ಒಟ್ಟಾಗಿ ನನಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.

‘ನೀರು ಹರಿಸುವ ಘಟಕದಿಂದ ವಿದ್ಯುತ್ ಕಳ್ಳತನ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ವಿದ್ಯುತ್ ಕಳವು ತಡೆಗೆ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳು ನನಗೆ ಸಹಾಯ ಮಾಡಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.