ಬುಧವಾರ, ಆಗಸ್ಟ್ 4, 2021
21 °C

ಜೂನ್‌ ತಿಂಗಳ ಪಡಿತರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕೋವಿಡ್‌–19 ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಅನ್ನಭಾಗ್ಯ ಯೋಜನೆ, ಪ್ರಧಾನಮಂತ್ರಿ ಗರೀಭ್ ಕಲ್ಯಾಣ ಮತ್ತು ಆತ್ಮ ನಿರ್ಭಾರ್ ಭಾರತ್ ಯೋಜನೆಯಡಿ ಜೂನ್ ತಿಂಗಳ ಪಡಿತರ ವಿತರಿಸಲಾಗುವುದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತ್ಯೋದಯ ಪಡಿತರ ಚೀಟಿಗೆ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ ಅಕ್ಕಿ, ಪ್ರತಿ ಕಾರ್ಡ್‌ಗೆ 35 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ತೊಗರಿ ಬೇಳೆ, ಆದ್ಯತಾ ಕುಟುಂಬ ಪಡಿತರ ಚೀಟಿಗೆ ಉಚಿತವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ, 2 ಕೆ.ಜಿ ತೊಗರಿ ಬೇಳೆ ಮತ್ತು 2 ಕೆ.ಜಿ ಗೋಧಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಆದ್ಯತೇತರ ಕುಟುಂಬ (ಎಪಿಎಲ್) ಪಡಿತರ ಚೀಟಿಗೆ ಪ್ರತಿ ಕೆ.ಜಿ ಅಕ್ಕಿಗೆ ₹ 15ರಂತೆ ಏಕಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ, ಎರಡಕ್ಕೂ ಹೆಚ್ಚಿನ ಸದಸ್ಯರಿಗೆ 10 ಕೆ.ಜಿ ಅಕ್ಕಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ಬಿಪಿಎಲ್ ಅರ್ಜಿಗೆ ಉಚಿತವಾಗಿ 10 ಕೆ.ಜಿ ಅಕ್ಕಿ, ಎಪಿಎಲ್ ಕಾರ್ಡ್‌ ಅರ್ಜಿಗೆ ಪ್ರತಿ ಕೆ.ಜಿ ₹ 15ರಂತೆ 10 ಕೆ.ಜಿ ಅಕ್ಕಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವಲಸೆ ಅಥವಾ ಪಡಿತರ ಚೀಟಿ ಪಡೆಯದೆ ಇರುವ ಪ್ರತಿ ಫಲಾನುಭವಿಗಳಿಗೆ (ಜೂನ್ ತಿಂಗಳಲ್ಲಿ ಮಾತ್ರ) ಉಚಿತವಾಗಿ ಮೇ ತಿಂಗಳಲ್ಲಿ ಅಕ್ಕಿ ಪಡೆಯದ ಫಲಾನುಭವಿಗೆ 10 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ಕಡಲೆಕಾಳು (ಲಭ್ಯತೆ ಅನುಸಾರ), ಮೇ ತಿಂಗಳಲ್ಲಿ ಅಕ್ಕಿ ಪಡೆದಿರುವ ಫಲಾನುಭವಿಗೆ 5 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ಕಡಲೆಕಾಳು (ಲಭ್ಯತೆ ಅನುಸಾರ) ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.