ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸಮಾವೇಶ

Last Updated 21 ಮಾರ್ಚ್ 2023, 5:33 IST
ಅಕ್ಷರ ಗಾತ್ರ

ನಂಗಲಿ (ಮುಳಬಾಗಿಲು): ‘ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿ ರೈತ ಪರ ಸರ್ಕಾರ ಎಂಬುವುದನ್ನು ಸಾಬೀತು ಮಾಡಿದ ಬಿಜೆಪಿಯನ್ನು ಈ ಬಾರಿ ರೈತರು ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ವಿಶ್ವಾಸ
ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಪಕ್ಷದ ಜಿಲ್ಲಾ ರೈತ ಮೋರ್ಚಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ರೈತರ ಸಾಲ ಮನ್ನಾ ಮಾಡುವ ಧೈರ್ಯವನ್ನು ಎರಡೂ ಪಕ್ಷಗಳು ಮಾಡಲಿಲ್ಲ. ಆದರೆ, ಜೆಡಿಎಸ್ ಜೊತೆಗೂಡಿ ಬಿಜೆಪಿ ಸರ್ಕಾರ ರಚಿಸಿದ್ದಾಗ ಯಡಿಯೂರಪ್ಪ ಅವರ ಮಾರ್ಗದರ್ಶನದಂತೆ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದರೆ ಹೊರತು ಅವರು ರೈತರ ಮೇಲಿನ ಇಷ್ಟದಿಂದ ಮಾಡಿದ್ದಲ್ಲ ಎಂದು ತಿಳಿಸಿದರು.

ಮುಖಂಡ ಶೀಗೆಹಳ್ಳಿ ಸುಂದರ್ ಮಾತನಾಡಿ, ಈ ಬಾರಿ ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆದ್ದು ಇತಿಹಾಸದ ಪುಟ ತೆರೆಯಲಿದೆ. ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ ಹಾಗೂ ಕೇಂದ್ರದಲ್ಲಿ ಇರುವ ನರೇಂದ್ರ ಮೋದಿ ಅವರ ಆಡಳಿತದ ಚಾಕಚಕ್ಯತೆ ಮೆಚ್ಚಿ ಜನರು ತಾಲ್ಲೂಕಿನಲ್ಲಿ ಬಿಜೆಪಿಗೆ ಮತ ಹಾಕಿ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಇನ್ನು ತಾಲ್ಲೂಕಿನಲ್ಲಿ ಬಿಜೆಪಿ ಬೇರುಗಳನ್ನು ಬಿಟ್ಟುಕೊಂಡು ಎಲ್ಲಾ ಕಡೆಗಳಲ್ಲೂ ಹರಡುತ್ತಿದೆ. ಹೀಗಾಗಿ, ಸಾವಿರಾರು ಸಂಖ್ಯೆಯಲ್ಲಿ ವಿರೋಧ ಪಕ್ಷದ ನಾಯಕರು ಪಕ್ಷಕ್ಕೆ ಇಷ್ಟಪಟ್ಟು ಸೇರುತ್ತಿದ್ದಾರೆ. ಆದ್ದರಿಂದ ಪಕ್ಷದ ಮತದಾರರಲ್ಲಿ ತಾಲ್ಲೂಕಿನ ಮೂಲೆ ಮೂಲೆಗಳಲ್ಲಿ ಪಕ್ಷದ ತತ್ವ, ಸಿದ್ಧಾಂತ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ತಿಳಿಸುವ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಪಕ್ಷ ರೈತರ ಪಕ್ಷವಾಗಿದೆ. ಸರ್ಕಾರದಿಂದ ಅನೇಕ ಯೋಜನೆಗಳನ್ನು ರೈತರ ಪರವಾಗಿ ಡಬಲ್ ಎಂಜಿನ್ ಸರ್ಕಾರಗಳು ನೀಡುತ್ತಿವೆ. ಇದರಲ್ಲಿ ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆ ಎಲ್ಲಾ ವರ್ಗದ ರೈತರನ್ನು ಕೈ ಹಿಡಿಯುತ್ತಿದೆ. ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ರೈತರಿಗೆ ಸಾವಿರಾರು ಸಂಖ್ಯೆಯಲ್ಲಿ ಯೋಜನೆಗಳು ಜಾರಿಯಾಗುವುದು ನಿಶ್ಚಿತ ಎಂದು ಹೇಳಿದರು.

ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಕೆ. ವಾಸುದೇವ್, ಮುಖಂಡ ಹಿರೇಮನಿ, ಸ್ಲಂ ಮೋರ್ಚಾ ಮಾಜಿ ಅಧ್ಯಕ್ಷ ವೈ. ಸುರೇಂದ್ರಗೌಡ, ಶೀಗೆಹಳ್ಳಿ ಸುಂದರ್, ಶೋಭಿತಾ ಶ್ರೀನಿವಾಸ್, ಕೋಳಿ ನಾಗರಾಜ್, ವಿಶ್ವನಾಥ ರೆಡ್ಡಿ, ವಕೀಲ ಜಯಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT