ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಯೋಗಥಾನ್‌ ಇಂದು

15 ಸಾವಿರ ಜನರಿಂದ ಯೋಗ ಪ್ರದರ್ಶನ ನಿರೀಕ್ಷೆ
Last Updated 15 ಜನವರಿ 2023, 6:30 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಭಾನುವಾರ ನಡೆಯಲಿರುವ ಯೋಗಥಾನ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶನಿವಾರ ಹಮ್ಮಿಕೊಂಡಿದ್ದ
ತಾ ಲೀಮಿನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.

ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7 ಗಂಟೆಗೆ ನಡೆದ ಯೋಗಥಾನ್‌ನಲ್ಲಿ ನಗರ ಹಾಗೂ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಭಾನುವಾರ ಬೆಳಿಗ್ಗೆ 6 ಗಂಟೆಗೆ ಆರಂಭವಾಗುವ ಯೋಗ ಪ್ರದರ್ಶನದಲ್ಲಿ ಸುಮಾರು 15 ಸಾವಿರ ಮಂದಿ ಭಾಗವಹಿಸಿ ಲಿಮ್ಕಾ ದಾಖಲೆ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಪ್ರತಿ ಶಾಲಾ, ಕಾಲೇಜಿನಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಸೂಚಿಸಲಾಗಿದೆ.

ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡು ಯೋಗಥಾನ್‍ಗೆ ಪ್ರವೇಶಿಸಬಹುದಾಗಿದ್ದು, ಯೋಗ ತರಬೇತಿ ಕಾರ್ಯಕ್ರಮದಲ್ಲಿ ಸೇರಿರುವ ವಿದ್ಯಾರ್ಥಿಗಳು ಬಂದಿದ್ದರು. ವಿದ್ಯಾರ್ಥಿ ಸಮೂಹಕ್ಕೆ ಕ್ರೀಡಾಂಗಣ ಸಾಲದಾಯಿತು. ಸಾವಿರಾರು ಮಕ್ಕಳು ಕ್ರೀಡಾಂಗಣದ ಮೆಟ್ಟಿಲುಗಳ ಮೇಲೆ ಕುಳಿತು ವೀಕ್ಷಿಸಿದರು.

ಸರ್ಕಾರಿ ನೌಕರರೂ ಯೋಗ ಥಾನ್ ಕಾರ್ಯಕ್ರಮದಲ್ಲಿ ಭಾಗವ ಹಿಸುತ್ತಿದ್ದು, ಜಿಲ್ಲಾಡಳಿತದ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿ ನೌಕರರ ಸಂಘ ಘೋಷಿಸಿದೆ. ಶಿಷ್ಟಾಚಾರ, ಭದ್ರತೆ, ಸಾರಿಗೆ, ಸ್ವಚ್ಛತೆ, ಪಾರ್ಕಿಂಗ್, ಕುಡಿಯುವ ನೀರು, ಲಘು ಉಪಾಹಾರ, ಶೌಚಾಲಯ ಹಾಗೂ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ.

ಯೋಗ ಶಿಕ್ಷಕರಾದ ಮಾರ್ಕಂಡೇಶ್ವರ್, ಚಂದ್ರಣ್ಣ, ಮಂಜುಳಾ, ವೆಂಕಟ, ಸೋಮಣ್ಣ ತರಬೇತಿ ನೀಡಿದರು. ಈಗಾಗಲೇ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್‌ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ, ಬಿಇಒ ಕನ್ನಯ್ಯ, ಆಯುಷ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT