ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ-ಮುನಿಯಪ್ಪ ಸುದೀರ್ಘ ಚರ್ಚೆ

ರಾಜಕಾರಣ
Last Updated 9 ಅಕ್ಟೋಬರ್ 2020, 20:00 IST
ಅಕ್ಷರ ಗಾತ್ರ

ಕೋಲಾರ: ಬೆಂಗಳೂರಿನಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ (ಸಿಡಬ್ಲ್ಯೂಸಿ) ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಕ್ಷ ಸಂಘಟನೆ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ, ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಉಭಯ ನಾಯಕರು ಗಂಭೀರ ಚರ್ಚೆ ನಡೆಸಿದರು.

‘ಸತತ 7 ಬಾರಿ ಸಂಸದರಾಗಿ ಮತ್ತು 2 ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದೀರಿ. ಇದೀಗ ಸಿಡಬ್ಲ್ಯೂಸಿ ಸದಸ್ಯರಾಗಿರುವ ತಾವು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ತುಂಬಬೇಕು. ಅಲ್ಲದೇ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು’ ಎಂದು ಶಿವಕುಮಾರ್ ಅವರು ಮುನಿಯಪ್ಪ ಅವರಿಗೆ ಮನವಿ ಮಾಡಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಶಿವಕುಮಾರ್‌, ‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣಕ್ಕಷ್ಟೇ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು. ಇದಕ್ಕೆ ತಮ್ಮ ಸಹಕಾರ ಮುಖ್ಯ’ ಎಂದು ಕೋರಿದರು.

‘ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕೇತ್ರಗಳ ಪೈಕಿ 6 ಕಡೆ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ ಲೋಕಸಭಾ ಸದಸ್ಯರೆಂಬ ಹೆಗ್ಗಳಿಕೆ ತಮ್ಮದು. ಈ ಸಾಧನೆಯನ್ನು ರಾಜ್ಯದಲ್ಲಿ ಎಲ್ಲಿಯೂ ಆಗಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ತಾವೇ ಕೋಲಾ ಜಿಲ್ಲೆಯ ನೇತೃತ್ವ ವಹಿಸಿ ಎಂಟೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT