ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮಗಳಿಗೆ ಅವಕಾಶ ನೀಡಬೇಡಿ

Last Updated 2 ಮಾರ್ಚ್ 2020, 13:06 IST
ಅಕ್ಷರ ಗಾತ್ರ

ಕೋಲಾರ: ‘ಯಾವುದೇ ರೀತಿಯ ಅಕ್ರಮಕ್ಕೆ ಎಡೆ ಮಾಡದಂತೆ ಶಾಂತಿಯುತವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು’ ಎಂದು ಪರೀಕ್ಷಾ ಕೇಂದ್ರ ಮುಖ್ಯಸ್ಥ ಹಾಗೂ ಪ್ರಾಂಶುಪಾಲ ಎನ್.ಮುನಿಕೃಷ್ಣಪ್ಪ ತಿಳಿಸಿದರು.

ನಗರದ ಪ್ರಕೃತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸೋಮವಾರ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿ, ‘ಮಾ.4ರಿಂದ 24ರತನಕ ನಡೆಯಲಿದ್ದು, ಪ್ರಕೃತಿ ಕಾಲೇಜಿನ ಕೇಂದ್ರದಲ್ಲಿ 592 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ’ ಎಂದರು.

‘ಪ್ರಕೃತಿ ಕಾಲೇಜು ಕೇಂದ್ರಕ್ಕೆ ಮೊರಾರ್ಜಿ ದೇಸಾಯಿ ಕಾಲೇಜು, ಮಿಲ್ಲತ್ ಪದವಿ ಪೂರ್ವ ಕಾಲೇಜು, ಮದನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗೆ ಬರುತ್ತಾರೆ. ಅವರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಎಲ್ಲಾ ಕೊಠಡಿಗಳಲ್ಲಿ ಪೀಠೋಪಕರಣ, ಆಸನಗಳು ಸಮರ್ಪಕವಾಗಿರಬೇಕು. ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರುವಂತಿಲ್ಲ. ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಉಪಯೋಗಿಸಬೇಕು’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಮಹೇಶ್, ಉಪನ್ಯಾಸಕರಾದ ಸುಬ್ರಹ್ಮಣ್ಯ ಹೆಗಡೆ, ನಾಗೇಶ್, ಟಿ.ಕೆ.ನಟರಾಜ್, ಜೆ.ಜಿ.ನಾಗರಾಜ, ಅಪ್ಪಯ್ಯಾಚಾರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT