ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪು ಮರುಕಳಿಸದಂತೆ ಎಚ್ಚರ ವಹಿಸಿ

Last Updated 6 ಜುಲೈ 2018, 13:11 IST
ಅಕ್ಷರ ಗಾತ್ರ

ಕೋಲಾರ: ‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆಗಿರುವ ತಪ್ಪುಗಳು ಲೋಕಸಭಾ ಚುನಾವಣೆಯಲ್ಲಿ ಮರುಕಳಿಸದಂತೆ ಕಾರ್ಯಕರ್ತರು ಎಚ್ಚರ ವಹಿಸಬೇಕು’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ನಾರಾಯಣಸ್ವಾಮಿ ಸಲಹೆ ನೀಡಿದರು.

ಪಕ್ಷದ ವತಿಯಿಂದ ತಾಲ್ಲೂಕಿನ ವೇಮಗಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಧಾನಸಭಾ ಕ್ಷೇತ್ರದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿ, ‘ಕೋಲಾರ ಒಳಗೊಂಡಂತೆ ಜಿಲ್ಲೆಯ ಆರೂ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ. ಸದ್ಯದಲ್ಲೇ ಲೋಕಸಭಾ ಚುನಾವಣೆ ಬರುತ್ತದೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಈಗಿನಿಂದಲೇ ಶ್ರಮ ವಹಿಸಿ’ ಎಂದರು.

‘ವಿಧಾನಸಭಾ ಚುನಾವಣಾ ಸೋಲನ್ನು ಸವಾಲಾಗಿ ಸ್ವೀಕರಿಸಿ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಹಿಂದಿನ ನಾಲ್ಕು ವರ್ಷದಲ್ಲಿ ಮೋದಿ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳೇ ಗೆಲುವಿಗೆ ಶ್ರೀರಕ್ಷೆ. ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ’ ಎಂದು ಕಿವಿಮಾತು ಹೇಳಿದರು.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರ ಸಲಹೆಯಂತೆ ಬೂತ್ ಮಟ್ಟದಿಂದ ಪಕ್ಷ ಬಲಪಡಿಸಬೇಕು. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳ ಬಗ್ಗೆ ಪ್ರಚಾರ ನಡೆಸಬೇಕು. ಕೇಂದ್ರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ, ಹಿಂದುಳಿದ ಘಟಕದ ಅಧ್ಯಕ್ಷ ಚಲಪತಿ, ತಾಲ್ಲೂಕು ಗ್ರಾಮಾಂತರ ಘಟಕದ ಅಧ್ಯಕ್ಷ ಬೈಚಪ್ಪ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಟಿ.ವಿ.ಕುಮಾರ್, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಶ್ರೀರಾಮ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT