ಕೋಲಾರ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ–2021ರ ಸಂಬಂಧ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಛೇರಿ, ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯಿತಿ ಕಚೇರಿಗಳು ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತದಾರರ ಹೆಸರು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಆ ಬಗ್ಗೆ ಗ್ರಾಮೀಣ ಪ್ರದೇಶದ ಮತದಾರರು ಆಕ್ಷೇಪಣೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದ ಹೆಸರುಗಳನ್ನು ಜಿ.ಪಂ ಮತ್ತು ತಾ.ಪಂಗೆ ಸಿದ್ಧಪಡಿಸಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದರೆ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಆಕ್ಷೇಪಣೆ ಸಲ್ಲಿಕೆಗೆ ಏ.22 ಕಡೆಯ ದಿನ. ಕರಡು ಮತದಾರರ ಪಟ್ಟಿ ಸಂಬಂಧ ಆಕ್ಷೇಪಣೆಯಿದ್ದರೆ ಸಂಬಂಧಪಟ್ಟ ತಹಶೀಲ್ದಾರ್‌ಗಳಿಗೆ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.