ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿದ ಸಂಸದ ಎಸ್.ಮುನಿಸ್ವಾಮಿ

Last Updated 18 ಜನವರಿ 2020, 13:56 IST
ಅಕ್ಷರ ಗಾತ್ರ

ಕೋಲಾರ: ‘ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಜಯಗಳಿಸಲು ಸಹಕಾರಿಯಾಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ನಗರದಲ್ಲಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ಶನಿವಾರ ಆರಂಭವಾದ ರಾಜ್ಯಮಟ್ಟದ ಪುರುಷ ಮತ್ತು ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಸೀನಿಯರ್ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ‘ಪಂದ್ಯಾವಳಿ ಏರ್ಪಡಿಸಿರುವುದು ಅತ್ಯಂತ ಸಂತೋಷದ ಸಂಗತಿ’ ಎಂದರು.

‘ಹಿಂದೆ ಕ್ರೀಡಾಕೂಟಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು, ಬದಲಾದ ಪರಿಸ್ಥಿಯಿಂದಾಗಿ ಯುವಕರು ಕ್ರೀಡೆಗಳಿಗೆ ಹೆಚ್ಚು ಗಮನಹರಿಸುತ್ತಿಲ್ಲ. ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯ ಸಮಾಜ ನಿರ್ಮಾಣದಲ್ಲಿ ತೊಗಡಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡರೆ ಗುರಿ ಸಾಧನೆಯೇನು ಕಷ್ಟವೆನಿಸುವುದಿಲ್ಲ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ‘ದೈಹಿಕ ಹಾಗೂ ಮಾನಸಿಕ ರೋಗಗಳನ್ನು ತಡೆಗಟ್ಟಲು ಕ್ರೀಡೆಗಳು ಸಹಕಾರಿ’. ‘ನಾವು ದೈಹಿಕವಾಗಿ ಆರೋಗ್ಯದಿಂದಿರಲು ಕ್ರೀಡೆ ಅತಿ ಮುಖ್ಯವಾಗಿದೆ. ಶಾಲಾ ಕಾಲೇಜುಗಳ ದಿನದಲ್ಲಿ ಓದುವ ಜತೆಗೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವುದು ಉತ್ತಮ’ ಎಂದರು.

ವಿವಿಧ ಜಿಲ್ಲೆಗಳಿಂದ ಒಟ್ಟು 40 ತಂಡಗಳು ಭಾಗವಹಿಸಿದದು, ಆ ಪೂಕಿ 16 ಬಾಲಕಿಯರ ಮತ್ತು 24 ಬಾಲಕರ ತಂಡಗಳು ಭಾಗವಹಿಸಿವೆ.ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT