ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕುಪ್ಪಂ: ₹ 1.50 ಕೋಟಿ ಮೊತ್ತದ ಗಾಂಜಾ ಜಪ್ತಿ

Last Updated 8 ಸೆಪ್ಟೆಂಬರ್ 2020, 14:34 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೆಜಿಎಫ್‌ನ ಮಾರಿಕುಪ್ಪಂ ಪ್ರದೇಶದ ಮನೆಯೊಂದರ ಮೇಲೆ ಮಂಗಳವಾರ ದಾಳಿ ನಡೆಸಿದ ಪೊಲೀಸರು ಸುಮಾರು ₹ 1.50 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಾರಿಕುಪ್ಪಂನ ಪಂಡಾರ್‌ ಲೈನ್‌ನಲ್ಲಿರುವ ಹಳೆ ಮನೆಯೊಂದರಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಗಾಂಜಾ ಎಲೆಗಳನ್ನು ದಾಸ್ತಾನು ಮಾಡಲಾಗಿದೆ ಎಂದು ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿ ಆಧರಿಸಿ ಮಾರಿಕುಪ್ಪಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.

‘ಗಾಂಜಾ ಪತ್ತೆಯಾಗಿರುವ ಮನೆಯು ರೌಡಿ ತಂಗಂ ಕುಟುಂಬ ಸದಸ್ಯರಿಗೆ ಸೇರಿದೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ’ ಎಂದು ಕೆಜಿಎಫ್‌ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಗಾಂಜಾ ಎಲೆಗಳನ್ನು ಮೂಟೆಗಳಲ್ಲಿ ತುಂಬಿಸಿ ಇಡಲಾಗಿತ್ತು. ಆರೋಪಿಗಳು ಎಲ್ಲಿಂದ ಗಾಂಜಾ ತಂದಿದ್ದರು ಮತ್ತು ಯಾರಿಗೆ ಮಾರಾಟ ಮಾಡಲು ಉದ್ದೇಶಿಸಿದ್ದರು ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಪರಾರಿಯಾಗಿರುವ ಆರೋಪಿಯನ್ನು ಬಂಧಿಸಿದ ನಂತರ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT