ಶನಿವಾರ, ಏಪ್ರಿಲ್ 1, 2023
23 °C

ಪೂರ್ವ ಮುಂಗಾರು ಬೆಳೆ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಯ ರೈತರು 2021ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್‌ ಬಳಸಿ ಬೆಳೆ ಸಮೀಕ್ಷೆ ಮಾಡಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ತಮ್ಮ ಜಮೀನುಗಳ ಸರ್ವೆ ನಂಬರ್‌, ಹಿಸ್ಸಾ ನಂಬರ್‌ಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಹಾಗೂ ಇತರೆ ಬೆಳೆಗಳ ವಿವರವನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ನಮೂದಿಸಬಹುದು. ನಿಗದಿತ ಸಮಯದೊಳಗೆ ಬೆಳೆ ಮಾಹಿತಿಯನ್ನು ಅಪ್‌ಲೋಡ್ ಮಾಡದಿದ್ದರೆ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕಾರ್ಯ ಪೂರ್ಣ ಗೊಳಿಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರೈತರು ಕಂದಾಯ, ಕೃಷಿ, ರೇಷ್ಮೆ ಇಲಾಖೆ ಅಧಿಕಾರಿಗಳು ಅಥವಾ ಸಿಬ್ಬಂದಿ ನೆರವಿನಿಂದ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಬೆಳೆ ವಿಸ್ತೀರ್ಣ ಲೆಕ್ಕ ಹಾಕಲು, ಬೆಳೆ ಹಾನಿ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ, ಬೆಂಬಲ ಬೆಲೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಲ್ಲಿ, ಆರ್‌ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು, ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ವರದಿ ಸಿದ್ಧಪಡಿಸಲು ಬೆಳೆ ಸಮೀಕ್ಷೆ ಮಾಹಿತಿ ಬಳಸಬಹುದು ಎಂದು ವಿವರಿಸಿದ್ದಾರೆ.

ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2021-22 ಆ್ಯಪ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಅಥವಾ ಆಯಾ ಗ್ರಾಮಗಳಿಗೆ ನಿಯೋಜನೆಗೊಂಡ ಖಾಸಗಿ ನಿವಾಸಿಗಳನ್ನು ಸಂಪರ್ಕಿಸ
ಬಹುದು ಎಂದು ಮಾಹಿತಿ
ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.