ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ನಂಜೇಗೌಡ ಮನೆ ಮೇಲೆ ಇ.ಡಿ. ದಾಳಿ; ಕೋಚಿಮುಲ್ ಕಚೇರಿ ಸೇರಿದಂತೆ ಹಲವೆಡೆ ಶೋಧ

Published 8 ಜನವರಿ 2024, 4:28 IST
Last Updated 8 ಜನವರಿ 2024, 4:28 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಶಾಸಕರ ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿ ನಿವಾಸ, ಶಾಸಕರ ಆಪ್ತ ಸಹಾಯಕ ಹರೀಶ್ ನಿವಾಸ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಚಿಮುಲ್ ಕಚೇರಿ, ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ನಿವಾಸ, ಆಡಳಿತಾತ್ಮಕ ನಿರ್ದೇಶಕ ನಾಗೇಶ್ ಅವರ ನಿವಾಸ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಶೋಧಿಸಿದ್ದಾರೆ.

ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಘೋಷಣೆಗೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಪಟ್ಟಿ ಹರಿದಾಡಿತ್ತು. ಅಭ್ಯರ್ಥಿಗಳ ಹೆಸರಿನ ಮುಂದೆ ಶಿಫಾರಸು ಮಾಡಿದವರ ಹೆಸರು ಇತ್ತು.

ನೇಮಕಾತಿ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಆರೋಪಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT