ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರ ಕ್ಷೇತ್ರದ ಚುನಾವಣೆ: ಆನೇಕಲ್‌ನಲ್ಲಿ 1061 ಮತದಾರರು

Published 15 ಫೆಬ್ರುವರಿ 2024, 14:28 IST
Last Updated 15 ಫೆಬ್ರುವರಿ 2024, 14:28 IST
ಅಕ್ಷರ ಗಾತ್ರ

ಆನೇಕಲ್ : ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಒಟ್ಟು 1061 ಮತದಾರರಿದ್ದು ಶುಕ್ರವಾರ ನಡೆಯಲಿರುವ ಚುನಾವಣೆಗೆ ಆನೇಕಲ್‌ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್‌ ಶಶಿಧರ್ ಮಾಡ್ಯಾಳ್‌ ತಿಳಿಸಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ ಪಿಆರ್‌ಒ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಚುನಾವಣೆ ಸುಗಮ ಮತ್ತು ಪಾರದರ್ಶಕವಾಗಿ ನಡೆಯಲು ಅವಶ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ, ತಾಲೂಕು ಪಂಚಾಯಿತಿಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆನೇಕಲ್‌, ನೆಲಮಂಗಲ, ಹೊಸಕೋಟೆ ಸೇರಿದಂತೆ ಹತ್ತು ಮತಗಟ್ಟೆಗಳಿವೆ. ಎಲ್ಲ ಮತಗಟ್ಟೆಗಳಿರುವ ಸ್ಥಳಗಳಲ್ಲಿರುವ 144ನೇ ಸೆಕ್ಷನ್‌ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಶುಕ್ರವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮದ್ಯ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅವಶ್ಯ ಪೊಲೀಸ್‌ ಬಂದೋಬಸ್ತ್‌ ಎಲ್ಲ ಮತಗಟ್ಟೆಗಳ ಬಳಿ ಏರ್ಪಡಿಸಲಾಗಿದೆ ಎಂದು ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಕಾಂಗ್ರೆಸ್‌ನ ಪುಟ್ಟಣ್ಣ ಮತ್ತು ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ರಂಗನಾಥ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT