ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ: ತಂತಿ ಬೇಲಿ ಅಳವಡಿಸಲು ಕ್ರಮ

Last Updated 9 ಜುಲೈ 2021, 4:02 IST
ಅಕ್ಷರ ಗಾತ್ರ

ಕೆಜಿಎಫ್‌: ‘ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ರೈತರ ಬೆಳೆ ನಾಶವಾಗುತ್ತಿರುವುದನ್ನು ತಡೆಯಲು ಸದ್ಯದಲ್ಲಿಯೇ ಸೋಲಾರ್‌ ಬೇಲಿ ನಿರ್ಮಾಣ ಮಾಡಲಾಗುವುದು’ ಎಂದು ಶಾಸಕಿ ಎಂ. ರೂಪಕಲಾ ತಿಳಿಸಿದರು.

ಘಟ್ಟಮಾದಮಂಗಲ ಗ್ರಾಮದ ಹಲವು ಜಮೀನುಗಳಿಗೆ ಆನೆಗಳು ನುಗ್ಗಿ ಅಪಾರ ಬೆಳೆಗಳನ್ನು ತುಳಿದು ಹಾಳು ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಕೆಲವು ರೈತರ ಜಮೀನಿಗೆ ಭೇಟಿ ನೀಡಿ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.

ಕಾಡಾನೆ ದಾಳಿಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಪದೇ ಪದೇ ಈ ರೀತಿಯ ಅವಘಡ ಸಂಭವಿಸುತ್ತಿವೆ. ಕಷ್ಟಪಟ್ಟು ಬೆಳೆ ಬೆಳೆದ ರೈತನ ಬಾಳು ಅಸಹನೀಯವಾಗಿದೆ. ಈ ಸಂಬಂಧ ಕಾಡಾನೆಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಸೋಲಾರ್ ಬೇಲಿಯನ್ನು ಕಾಮ ಸಮುದ್ರ ಸಮೀಪದ ಕಾಡಿನಲ್ಲಿ ಅಳವ ಡಿಸುತ್ತಿದ್ದು, ಸದ್ಯದಲ್ಲಿಯೇ ಕೆಜಿಎಫ್ ತಾಲ್ಲೂಕಿನ ಗ್ರಾಮಗಳಲ್ಲಿ ಕೂಡ ಅಳವಡಿಸಲಾಗುವುದು ಎಂದರು.

ಬೆಳೆ ಹಾನಿಯಾದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಸೂಚಿಸಿದರು.

ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಅರಣ್ಯ ಅಧಿಕಾರಿ ವೇಣು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT