ಕೋಲಾರ: ‘ಸಹಕಾರ ಸಂಘಗಳು ರಾಜಕೀಯ ರಹಿತವಾಗಿ ಮಹಿಳೆಯರು ಮತ್ತು ರೈತರ ಸಬಲೀಕರಣಕ್ಕೆ ಒತ್ತು ನೀಡಿದರೆ ಲಾಭ ಗಳಿಸಲು ಸಹಕಾರಿಯಾಗುತ್ತದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹುತ್ತೂರು ರೇಷ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘವು (ಎಸ್ಎಫ್ಸಿಎಸ್) ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಹುತ್ತೂರು ಹೋಬಳಿ ಸೊಸೈಟಿ ವ್ಯವಸ್ಥೆ ಸರಿಪಡಿಸಲು ಸಂಪೂರ್ಣ ಸಹಕಾರ ಕೊಡುತ್ತೇನೆ’ ಎಂದು ಭರವಸೆ ನೀಡಿದರು.

‘ಸೊಸೈಟಿಯಲ್ಲಿ ಹಿಂದೆ ಆಗಿರುವ ಲೋಪ ಸರಿಪಡಿಸಿಕೊಳ್ಳಬೇಕು. ತಾರತಮ್ಯಕ್ಕೆ ಅವಕಾಶವಿಲ್ಲದೆ ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ರೈತರಿಗೆ ಸಾಲ ಒದಗಿಸಲು ಡಿಸಿಸಿ ಬ್ಯಾಂಕ್ ಅಗತ್ಯ ಕ್ರಮ ಕೈಗೊಂಡಿದೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಸಂಘಕ್ಕೆ ಹಿನ್ನಡೆಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸೊಸೈಟಿ ಆಡಳಿತ ಮಂಡಳಿ ಸಭೆ ನಡೆಸಿ ಲೋಪ ಸರಿಪಡಿಸುತ್ತೇವೆ. ಮುಂದೆ ಇಂತಹ ಪರಿಸ್ಥಿತಿ ಎದುರಾಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಹುತ್ತೂರು ಸೊಸೈಟಿ ಅಧ್ಯಕ್ಷ ವಿ.ರಾಮು ಹೇಳಿದರು.

ಹುತ್ತೂರು ಎಸ್ಎಫ್ಸಿಎಸ್ ಉಪಾಧ್ಯಕ್ಷ ಅಂಬರೀಶ್, ನಿರ್ದೇಶಕರಾದ ರಮೇಶ್, ಬೈರೇಗೌಡ, ಚಂದ್ರಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವೆಂಕಟೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.