13ರಂದು ಜಿಲ್ಲಾ ನೌಕರರ ಸಂಘದ ಚುನಾವಣೆ

ಬುಧವಾರ, ಜೂನ್ 26, 2019
24 °C

13ರಂದು ಜಿಲ್ಲಾ ನೌಕರರ ಸಂಘದ ಚುನಾವಣೆ

Published:
Updated:

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಕೇಂದ್ರದಲ್ಲಿನ 46 ಇಲಾಖೆಗಳಿಂದ 52 ಮಂದಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 6 ಸ್ಥಾನಗಳಿಗೆ ಜೂ.13ರಂದು ಚುನಾವಣೆಯ ನಡೆಯಲಿದೆ.

ಗುರುವಾರ ಬೆಳಿಗ್ಗೆ 11ಗಂಟೆಯಿಂದ ಸಂಜೆ 4 ಗಂಟೆಯವರೆಗೂ ನಗರದ ಮೆಥೋಡಿಸ್ಟ್ ಶಾಲೆಯಲ್ಲಿ ಚುನಾವಣೆ ನಡೆಯಲಿದ್ದು, 46 ಇಲಾಖೆಗಳ ಒಟ್ಟು 52 ಸ್ಥಾನಗಳಿಗೆ ಆಯಾ ಇಲಾಖೆಯ ನೌಕರರು ಒಮ್ಮತದ ಆಯ್ಕೆ ಮಾಡಿಕೊಂಡು ಚುನಾವಣೆಯನ್ನು ತಪ್ಪಿಸಿ ಅವಿರೋಧ ಆಯ್ಕೆಗೆ ಸಹಕಾರ ನೀಡಿದ್ದಾರೆ.

ಪ್ರೌಢಶಿಕ್ಷಣ ವಿಭಾಗದಿಂದ 2, ಪ್ರಾಥಮಿಕ ಶಿಕ್ಷಣ ವಿಭಾಗದಿಂದ 4 ಹಾಗೂ ವೈದ್ಯಕೀಯ ಶಿಕ್ಷಣ ವಿಭಾಗದಿಂದ 2 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.

ಪ್ರೌಢಶಾಲಾ ವಿಭಾಗದಿಂದ ಹಾಲಿ ನೌಕರರ ಸಂಘದ ಖಜಾಂಚಿ ಎಸ್.ಚೌಡಪ್ಪ ಮತ್ತು ಶಿಕ್ಷಕಿ ಬಿ.ಎ.ಕವಿತಾ ಕಣಕ್ಕಿಳಿದಿದ್ದು, ಎರಡೂ ಸ್ಥಾನಗಳನ್ನು ತಮ್ಮದಾಗಿಸಿಕೊಳ್ಳಲು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಉಳಿದಂತೆ ಎರಡು ಸ್ಥಾನಗಳಿಗೆ ವಿ.ಮುರಳಿಮೋಹನ್ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಒಟ್ಟು 343 ಮಂದಿ ಮತದಾರ ಶಿಕ್ಷಕರು, ಲಿಪಿಕ, ಡಿ ದರ್ಜೆ ನೌಕರರು ಮತದಾನದ ಹಕ್ಕು ಪಡೆದುಕೊಂಡಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಿಂದ 4 ಸ್ಥಾನಗಳಿಗೆ ಆಯ್ಕೆ ನಡೆಯಬೇಕಾಗಿದ್ದು, 11 ಮಂದಿ ಕಣದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣ ವಿಭಾಗದಲ್ಲಿ 1,139 ಮತದಾರ ಶಿಕ್ಷಕರಿದ್ದು, ಯಾರು ಗೆಲ್ಲುತ್ತಾರೆ ಎಂಬುದು ಗುರುವಾರ ನಿರ್ಧಾರಗೊಳ್ಳಲಿದೆ. ವೈದ್ಯಕೀಯ ಶಿಕ್ಷಣ ಜಿಲ್ಲಾ ಆಸ್ಪತ್ರೆಯಿಂದ ಇಬ್ಬರ ಆಯ್ಕೆಗೆ ಅವಕಾಶವಿದ್ದು, 135 ಮತದಾರರು ಇವರ ಭವಿಷ್ಯ ನಿರ್ಧರಿಸಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !