ಕೆಜಿಎಫ್: ನಗರದ ಡಾ.ಟಿ.ತಿಮ್ಮಯ್ಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಅದೇ ತರಗತಿಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಊರಿಗಾಂ ಪೊಲೀಸರು ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ.
ಕಾಲೇಜಿನ ನಾಲ್ಕನೇ ಸೆಮಿಸ್ಟರ್ ಮೆಕಾನಿಕಲ್ ಎಂಜಿನಿಯರಿಂಗ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹೇಮಂತ್ ಕುಮಾರ್ ಮೇಲೆ ಹಲ್ಲೆ ನಡೆದಿದ್ದು, ಆತನ ಸಹಪಾಠಿ ರೋಹಿತ್ ಆರೋಪಿಯಾಗಿದ್ದಾನೆ.
ಗುರುವಾರ ಕಾಲೇಜಿನ ಮುಂಭಾಗದಲ್ಲಿ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಹೇಮಂತ್‌ಕುಮಾರ್ ಮತ್ತು ಆತನ ಸಹಪಾಠಿಗಳು ಆಟ ನೋಡುತ್ತಿದ್ದರು. ಈ ಸಂದರ್ಭದಲ್ಲಿ ಕ್ರಿಕೆಟ್ ಆಡುತ್ತಿದ್ದ ರೋಹಿತ್ ತನ್ನ ಗುರಾಯಿಸಿ ನೋಡುತ್ತಿದ್ದೀ ಎಂದು ಹೇಮಂತ್‌ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಮುಖದ ಮೇಲೆ ಗಾಯಗೊಂಡ ಹೇಮಂತ್ ಕುಮಾರ್‌ನನ್ನು ಇತರ ಸಹಪಾಠಿಗಳು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರು. ಪ್ರಕರಣದ ತನಿಖೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.