ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಎಸ್‌ಎನ್‌ಆರ್‌ ಆಸ್ಪತ್ರೆಗೆ ಅಗತ್ಯ ಸೌಲಭ್ಯ

Last Updated 3 ಆಗಸ್ಟ್ 2020, 16:05 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಕೇಂದ್ರದ ಎಸ್‌ಎನ್‌ಆರ್‌ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

ಇಲ್ಲಿ ಸೋಮವಾರ ಎಸ್ಎನ್‌ಆರ್‌ ಆಸ್ಪತ್ರೆಗೆ ಭೇಡಿ ಪರಿಶೀಲನೆ ನಡೆಸಿ ಮಾತನಾಡಿ, ‘ನಾನು ಸಚಿವನಾಗಿದ್ದಾಗ ಈ ಆಸ್ಪತ್ರೆಯನ್ನು 250 ಹಾಸಿಗೆ ಸಾಮರ್ಥ್ಯದಿಂದ 450 ಹಾಸಿಗೆಗೆ ಏರಿಸಲಾಯಿತು. ಜನರು ಎಸ್ಎನ್ಆರ್ ಆಸ್ಪತ್ರೆಯನ್ನು ಧರ್ಮಾಸ್ಪತ್ರೆ ಎಂದು ಕರೆಯುತ್ತಾರೆ’ ಎಂದರು.

‘ಕೊರೊನಾ ಸೋಂಕಿನ ತಡೆಗೆ ಸರ್ಕಾರ ಸರ್ವ ಪ್ರಯತ್ನ ನಡೆಸಿದೆ. ಆದರೂ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ವೈದ್ಯರು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೋಂಕಿನ ತಡೆಗೆ ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಿದೆ. ಸೋಂಕಿತರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆ ಸಾಕಾಗುತ್ತಿಲ್ಲ. ಸರ್ಕಾರದ ಜತೆ ಚರ್ಚಿಸಿ ಆಸ್ಪತ್ರೆಯನ್ನು ಮೇಲ್ಡರ್ಜೆಗೆ ಏರಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಂಭವವಿದ್ದು, ಸೋಂಕಿನ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮೃತಪಟ್ಟಿಲ್ಲ: ‘ಜಿಲ್ಲಾಸ್ಪತ್ರೆಗೆ ದಾಖಲಾದ ಕೊರೊನಾ ಸೋಂಕಿತರು ಪೈಕಿ ಯಾರೊಬ್ಬರೂ ಮೃತಪಟ್ಟಿಲ್ಲ. ಜಿಲ್ಲೆಯ ಕೆಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿ ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್ ವಿವರಿಸಿದರು.

‘ಸೋಂಕಿತರ ಚಿಕಿತ್ಸೆಗಾಗಿ ಎಸ್‌ಎನ್‌ಆರ್‌ ಆಸ್ಪತ್ರೆ, ಕೆಜಿಎಫ್‌ನ ಸಂಭ್ರಮ್ ಆಸ್ಪತ್ರೆ ಹಾಗೂ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿಡಲಾಗಿದೆ. ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಕಾಯ್ದಿರಿಸಿ, ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ನಗರಸಭೆ ಸದಸ್ಯ ರಾಕೇಶ್, ವೈದ್ಯ ನಾರಾಯಣಸ್ವಾಮಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT