ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ದೂರು ನಿರ್ವಹಣಾ ಕೋಶ ಸ್ಥಾಪನೆ

Last Updated 10 ಅಕ್ಟೋಬರ್ 2020, 9:57 IST
ಅಕ್ಷರ ಗಾತ್ರ

ಕೋಲಾರ: ಆಗ್ನೇಯ ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆ ಸಂಬಂಧ ದೂರು ನಿರ್ವಹಣಾ ಕೋಶ ಸ್ಥಾಪಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.28ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ಜಿಲ್ಲೆ ವ್ಯಾಪ್ತಿಯಲ್ಲಿ ನೀತಿಸಂಹಿತೆಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರುಗಳಿದ್ದರೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕುಗಳಲ್ಲಿನ ನಿಯಂತ್ರಣ ಕೊಠಡಿಗೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08152 243507, ಕೋಲಾರ ತಾಲ್ಲೂಕಿನ ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08152 222056, ಮುಳಬಾಗಿಲು ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08159 242049, ಬಂಗಾರಪೇಟೆ ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08153 255263, ಮಾಲೂರು ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08151 232699, ಶ್ರೀನಿವಾಸಪುರ ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08157 245060, ಕೆಜಿಎಫ್ ತಾಲ್ಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08153 271674ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT