ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮಸೀದಿ, ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ

Last Updated 13 ಫೆಬ್ರವರಿ 2023, 8:40 IST
ಅಕ್ಷರ ಗಾತ್ರ

ಕೋಲಾರ: ರೈತ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೋಲಾರ ಕ್ಷೇತ್ರಕ್ಕೆ ಬಂದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ವೇಮಗಲ್ ನಲ್ಲಿ ಮಸೀದಿ ಹಾಗೂ ದೇಗುಲಕ್ಕೆ ಭೇಟಿ ನೀಡಿದರು.

ವೇಮಗಲ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿರುವ ರೈತ ಸಮಾವೇಶದಲ್ಲಿ ಪಾಲ್ಗೊಂಡರು.

ಡಿಸಿಸಿ ಬ್ಯಾಂಕ್ ನಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆದಿದ್ದ ಸ್ತ್ರೀಶಕ್ತಿ ಸಂಘಗಳು, ಸ್ವಸಹಾಯ ಸಂಘ ಹಾಗೂ ರೈತ ಮಹಿಳೆಯರನ್ನು ಈ ಕಾರ್ಯಕ್ರಮಕ್ಕೆ ಸೇರಿಸಲಾಗಿದೆ. ಈ ಜವಾಬ್ದಾರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೊತ್ತಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಸಿದ್ದರಾಮಯ್ಯ ಅವರ ನಾಲ್ಕನೇ ಭೇಟಿ ಇದಾಗಿದೆ. ಬೆಳಿಗ್ಗೆ ನರಸಾಪುರ ಹೋಬಳಿಯ ಬೆಳ್ಳೂರಿನಲ್ಲಿ ಅಂತರರಾಷ್ಟ್ರೀಯ ಯೋಗ ಕೇಂದ್ರಕ್ಕೆ ಭೇಟಿ ನೀಡಿ ದಿವಂಗತ ಬಿ.ಕೆ.ಎಸ್.ಅಯ್ಯಂಗಾರ್ ಅವರಿಗೆ ಗೌರವ ಸಮರ್ಪಿಸಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT