ಕೋಲಾರ: ನಕಲಿ ಜಾತಿ ಪ್ರಮಾಣಪತ್ರದ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಸಭೆಯ ಮಹತ್ವದ ತೀರ್ಮಾನ ಕೈಗೊಂಡಿದೆ.

ಒಟ್ಟು 46 ಪ್ರಕರಣಗಳ ಪೈಕಿ 7 ಪ್ರಕರಣಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ದೃಢಪಟ್ಟಿದೆ.

ಜಿಲ್ಲಾಧಿಕಾರಿಯೂ ಆಗಿರುವ ಸಮಿತಿ ಅಧ್ಯಕ್ಷ ರವಿ ನೇತೃತ್ವದಲ್ಲಿ ವಿವಿಧ ಸಭೆಗಳಲ್ಲಿ ಜಾತಿ ಪ್ರಮಾಣಪತ್ರಗಳ ಸಿಂಧುತ್ವದ ಕುರಿತು ವಿಚಾರಣೆ ನಡೆಸಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ಜಿಲ್ಲೆಗೆ ಸಂಬಂಧಿಸಿದಂತೆ 32 ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣಗಳನ್ನು ತನಿಖೆ ನಡೆಸಿ ಅಂತಿಮ ತೀರ್ಮಾನಕ್ಕಾಗಿ ಸಮಿತಿಗೆ ಕಳುಹಿಸಿತ್ತು.

ಈ 32 ಪ್ರಕರಣಗಳ ವಿಚಾರಣೆ ನಡೆಸಿದ ಸಮಿತಿಯು ಒಟ್ಟು 17 ಪ್ರಕರಣಗಳಲ್ಲಿ ಅಂತಿಮ ನಿರ್ಧಾರ ಕೈಗೊಂಡಿದೆ.

ಏಳು ಪ್ರಕರಣದಲ್ಲಿ ಸುಳ್ಳು ಪ್ರಮಾಣಪತ್ರ ಪಡೆದಿರುವುದು ಸಾಬೀತಾಗಿದೆ. ನಾಲ್ಕು ಪ್ರಮಾಣಪತ್ರಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿರುವುದು ಸಾಬೀತಾಗಿದೆ. ಐದು ಪ್ರಕರಣಗಳಲ್ಲಿ ಅಭ್ಯರ್ಥಿಗಳು ಈಗಾಗಲೇ ಸಿಂಧುತ್ವ ಪ್ರಮಾಣಪತ್ರ ಪಡೆದಿದ್ದರಿಂದ ವಿಚಾರಣೆ ಕೈಬಿಡಲಾಗಿದೆ. ಒಂದು ಪ್ರಕರಣದಲ್ಲಿ ಅಭ್ಯರ್ಥಿ ಮೃತಪಟ್ಟಿರುವುದರಿಂದ ಅದನ್ನು ಮುಕ್ತಾಯಗೊಳಿಸಲಾಗಿದೆ.

ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ನೇರವಾಗಿ ದಾಖಲಾಗಿದ್ದ ಒಟ್ಟು 14 ಪ್ರಕರಣಗಳ ಸ್ಥಿತಿಯನ್ನೂ ವಿವರಿಸಲಾಗಿದೆ. 10 ಪ್ರಕರಣಗಳನ್ನು ತನಿಖೆ ನಡೆಸಿ ವರದಿ ನೀಡಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಕೋಲಾರ ಘಟಕದ ಪೊಲೀಸ್ ಅಧಿಕಾರಿಗೆ ಕಳುಹಿಸಲಾಗಿದೆ. ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಳಿದ 2 ಪ್ರಕರಣಗಳಲ್ಲಿ 1 ಪ್ರಕರಣ ಸುಳ್ಳು ಎಂದು ಸಾಬೀತಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ಸಿಂಧುತ್ವ ಪ್ರಮಾಣಪತ್ರ ಪಡೆದ ಕಾರಣ ವಿಚಾರಣೆ ಅಂತ್ಯಗೊಳಿಸಲಾಗಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹಾಗೂ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಂ.ಶ್ರೀನಿವಾಸನ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಹಾವಳಿಗೆ ಕಡಿವಾಣ ಹಾಕಲು ಪ್ರಯತ್ನ