ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ರೈತರು ಸ್ವಾವಲಂಬಿ ಜೀವನ ನಡೆಸಿ

Last Updated 29 ಅಕ್ಟೋಬರ್ 2020, 15:50 IST
ಅಕ್ಷರ ಗಾತ್ರ

ಕೋಲಾರ: ‘ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲಿನ ಗುಣಮಟ್ಟ ಕಾಪಾಡಿದಾಗ ಮಾತ್ರ ಆರ್ಥಿಕವಾಗಿ ಸಬಲರಾಗಬಹುದು’ ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತಂಬಿಹಳ್ಳಿ ಗೇಟ್‌ನಲ್ಲಿ ಗುರುವಾರ ನೂತನ ನಂದಿನಿ ಮಿಲ್ಕ್ ಪಾರ್ಲರ್‌ ಉದ್ಘಾಟಿಸಿ ಮಾತನಾಡಿ, ರೈತರು ಹೈನುಗಾರಿಕೆ ಜತೆಗೆ ಆದಾಯೋತ್ಪನ್ನ ಚಟುವಟಿಕೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಕಿವಿಮಾತು ಹೇಳಿದರು.

‘ನಂದಿನ ಮಿಲ್ಕ್‌ ಪಾರ್ಲರ್‌ ಕಾರ್ಯಾರಂಭ ಮಾಡಿರುವುದರಿಂದ ತಂಬಿಹಳ್ಳಿ ಭಾಗದ ಜನರಿಗೆ ನಂದಿನಿ ಉತ್ಪನ್ನಗಳು ಹತ್ತಿರದಲ್ಲೇ ಸಿಗಲಿವೆ. ಒಕ್ಕೂಟದಲ್ಲಿ ಪ್ರತಿನಿತ್ಯ ಸುಮಾರು 10 ಲಕ್ಷ ಲೀಟರ್‌ ಹಾಲು ಸಂಗ್ರಹಣೆಯಾಗುತ್ತಿದ್ದು, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಿ ದೇಶದ ವಿವಿಧೆಡೆ ಮಾರಾಟ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

‘ಹಾಲು ಉತ್ಪಾದಕರಿಗೆ ಬಟವಾಡೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಒಕ್ಕೂಟದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಿಲ್ಕ್ ಪಾರ್ಲರ್‌ಗಳನ್ನು ತೆರೆದು ನಂದಿನಿ ಉತ್ಪನ್ನಗಳು ಎಲ್ಲೆಡೆ ದೊರೆಯುವಂತೆ ಮಾಡಲಾಗುತ್ತದೆ. ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಕೋಚಿಮುಲ್‌ ಶಿಬಿರ ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ, ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ಗ್ರಾ.ಪಂ ಮಾಜಿ ಸದಸ್ಯ ಎನ್.ವೆಂಕಟೇಶಯ್ಯ, ಯಾನಾದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್‌.ಗೋಪಾಲ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT