ಮಂಗಳವಾರ, ಡಿಸೆಂಬರ್ 1, 2020
18 °C

ನಂಗಲಿ: ನಿವೃತ್ತ ಎಎಸ್‌ಐಗೆ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಗಲಿ: ಇಲ್ಲಿನ ಪೊಲೀಸ್ ಇಲಾಖೆಯಲ್ಲಿ ಮೂರೂವರೆ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಎಸ್‌ಐ ಜಿ. ವೆಂಕಟರಾಜು ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ಪೊಲೀಸ್ ಠಾಣಾ ಆವರಣದಲ್ಲಿ ವೆಂಕಟರಾಜು ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಪಿಎಸ್‍ಐ ಎನ್. ಅನಿಲ್‍ಕುಮಾರ್, ‘ವೆಂಕಟರಾಜು ಅವರು ಶಿಸ್ತು, ಸಂಯಮಕ್ಕೆ ಹೆಸರಾಗಿದ್ದರು. ಸಾರ್ವಜನಿಕರೊಂದಿಗೆ ಸಮಾಧಾನದಿಂದ ಮಾತನಾಡುತ್ತಿದ್ದ ಅವರ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ. ನಿವೃತ್ತಿ ಎಂಬುದು ಅನಿವಾರ್ಯ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಸೇರಿದಂತೆ ದೇಶದ ಭದ್ರತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು. ಸಾರ್ವಜನಿಕರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರಿಗೆ ಸಹಕಾರ ನೀಡಬೇಕು’ ಎಂದು ಕೋರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.