ಬಂಗಾರಪೇಟೆ: ಪಟ್ಟಣದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್, ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೊ ಮತ್ತು ಕೃಷಿ ವಿಜ್ಞಾನ ಕೇಂದ್ರ ಕೋಲಾರ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಅಡಿಯಲ್ಲಿ ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು.

ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವವು ರೈತರಿಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ಪರಿಸರ ಸಂರಕ್ಷಿಸಲು ಸಹಾಯ ಮಾಡುತ್ತದೆ. ರಾಸಾಯನಿಕ ಕೀಟನಾಶಕಗಳ ಬದಲಾಗಿ, ಜೈವಿಕ ನಿಯಂತ್ರಣವು ಪರಿಸರ ಸ್ನೇಹಿ ಮತ್ತು ಮಾನವನ ಆರೋಗ್ಯಕ್ಕೆ ಸುರಕ್ಷಿತ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ತಿಳಿಸಿದರು.

ರೈತ ಉತ್ಪಾದಕ ಕಂಪನಿಗಳು ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು, ಉತ್ತಮ ಬೆಲೆ ಪಡೆಯಲು ಮತ್ತು ಕೃಷಿ ವೆಚ್ಚ ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದರು.

ಸುಶೀಲ್, ಕಪಾಲಿ ಶಂಕರ್, ಹೊಸ ರಾಯಪ್ಪ, ನಾರಾಯಣ ಸ್ವಾಮಿ, ಬೋಪ್ಪನಹಳ್ಳಿ ನಾರಾಯಣಪ್ಪ, ರಾಜಪ್ಪ, ಜೆ.ಶ್ರೀನಿವಾಸ್, ಸಾಗರ್ ಪ್ರಭು ಗುಂಡಪ್ಪ, ಬಿ.ನಾರಾಯಣಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.