ಬುಧವಾರ, ಮಾರ್ಚ್ 29, 2023
30 °C

ಹಬ್ಬ ಬಾಂಧವ್ಯ ಬೆಸೆಯುವ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಹಬ್ಬಗಳು ಬಾಂಧವ್ಯ ಬೆಸೆಯುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಆಚರಣೆಗಳಾಗಿದ್ದು, ಗೌರಿ ಗಣೇಶ ಹಬ್ಬವು ಸರ್ವರಿಗೂ ಶುಭ ಉಂಟು ಮಾಡಲಿ. ಜಿಲ್ಲೆಯಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ’ ಎಂದು ಚಂದನವನ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಚಂದನ್‌ಗೌಡ ಆಶಿಸಿದರು.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದನವನ ಚಾರಿಟಬಲ್ ಟ್ರಸ್ಟ್‌ ವತಿಯಿಂದ ತಾಲ್ಲೂಕಿನ ಅಮ್ಮನಲ್ಲೂರು ಮತ್ತು ಕ್ಯಾಲನೂರು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಮಡಿಲು ತುಂಬುವ ಹಾಗೂ ಯುವಕರಿಗೆ ಗಣೇಶ ಮೂರ್ತಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಾನು ಆತ್ಮತೃಪ್ತಿಗಾಗಿ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಅರ್ಹರಿಗೆ ಅವಶ್ಯಕತೆಗಳನ್ನು ಅಗತ್ಯ ಸಂದರ್ಭದಲ್ಲಿ ಒದಗಿಸಿದಾಗ ಪಡೆದವರಿಗೂ ಹಾಗೂ ನೀಡಿದವರಿಗೂ ಆತ್ಮತೃಪ್ತಿ ಬರುತ್ತದೆ. ರಾಜಕೀಯ ಲಾಭಕ್ಕಾಗಿ ಸಮಾಜ ಸೇವೆ ಮಾಡುತ್ತಿಲ್ಲ’ ಎಂದು ಹೇಳಿದರು.

‘ಕೋವಿಡ್‌ ಸಂಕಷ್ಟದಿಂದ ಬಡ ಜನರು, ಜನಸಾಮಾನ್ಯರು ಬದುಕು ಬೀದಿ ಪಾಲಾಗಿದೆ. ಈ ಸಂಕಷ್ಟ ದೂರ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜನರು ಕೋವಿಡ್ ಸುರಕ್ಷತಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ತಪ್ಪದೇ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ವದಂತಿಗೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಗರ್ಭಿಣಿಯರಿಗೆ ಬಾಗಿನ ಅರ್ಪಿಸಲಾಯಿತು. ಕೊರೊನಾ ವಾರಿಯರ್ಸ್‌ಗಳಿಗೆ ಸೀರೆ ಮತ್ತು ಗ್ರಾಮಗಳ ಯುವಕ ಸಂಘಗಳಿಗೆ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಬೆಳಮಾರನಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರಗೌಡ, ಕ್ಯಾಲನೂರು ಗ್ರಾ.ಪಂ ಉಪಾಧ್ಯಕ್ಷ ಅನಿಲ್, ಸದಸ್ಯರಾದ ಚಿಕ್ಕಪ್ಪಯ್ಯ, ಎ.ಟಿ.ರಾಮಪ್ಪ, ನಾಗೇಶ್, ವೈದ್ಯರಾದ ಡಾ.ವಿನಯ್, ಡಾ.ಅಲ್ತಾಫ್ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.