ಗುರುವಾರ , ಡಿಸೆಂಬರ್ 5, 2019
21 °C

ಮೂಲಭೂತ ಹಕ್ಕು ರಕ್ಷಣೆಗೆ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಸಂವಿಧಾನಾತ್ಮಕ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಸಮಿತಿ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗುತ್ತದೆ’ ಎಂದು ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ನಾಗರಾಜ್ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜನರ ಮೂಲಭೂತ ಹಕ್ಕುಗಳಿಗೆ ರಕ್ಷಣೆ ಇಲ್ಲವಾಗಿದೆ. ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ ಬಡತನ, ನಿರುದ್ಯೋಗ, ಹಸಿವು ಸಮಸ್ಯೆಯಿದೆ. ಈ ಸಂಬಂಧ ಹೋರಾಟ ಮಾಡಲು ಜಿಲ್ಲೆಯಲ್ಲಿ ಸಮಿತಿಯ ಘಟಕ ಆರಂಭಿಸಲಾಗಿದೆ’ ಎಂದರು.

‘ರಾಜ್ಯದಲ್ಲಿ ಸರ್ಕಾರಿ ಜಮೀನುಗಳ ರಕ್ಷಣೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಹೋರಾಟ ನಡೆಸಲಾಗುತ್ತದೆ. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವೆಂಕಟೇಶ್ ಅವರನ್ನು ನೇಮಿಸಲಾಗಿದೆ. ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತದೆ’ ಎಂದು ಹೇಳಿದರು.

‘ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ಸಮಿತಿ ವತಿಯಿಂದ ಜನರಿಗೆ ತಿಳಿವಳಿಕೆ ಮೂಡಿಸಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳಿಗೆ ಸಮಿತಿಯು ರಕ್ಷಣೆ ನೀಡಲಿದೆ’ ಎಂದು ವೆಂಕಟೇಶ್ ತಿಳಿಸಿದರು.

ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ವಿಶ್ವನಾಥ್, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಬೆಟ್ಟಪ್ಪ, ಮುನಿರತ್ನಮ್ಮ ಹಾಜರಿದ್ದರು.

ಪ್ರತಿಕ್ರಿಯಿಸಿ (+)