ವೇಮಗಲ್: ಗ್ರಾಮದ ವಿವಿಧೆಡೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದ ಜನರಿಗೆ ಶಿಸ್ತುಕ್ರಮದ ಬಿಸಿ ಮುಟ್ಟಿಸಿದರು.

ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಆದೇಶಿಸಿದೆ. ಆದರೆ, ಸಾಕಷ್ಟು ಮಂದಿ ಈ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸದೆ ಗ್ರಾಮದ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದರು.

ಹೀಗಾಗಿ ಇನ್‌ಸ್ಪೆಕ್ಟರ್ ಶಿವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಜನರನ್ನು ತಡೆದು ಮಾಸ್ಕ್ ಧರಿಸದಿರುವ ಬಗ್ಗೆ ತಪಾಸಣೆ ಮಾಡಿದರು. ಬೈಕ್ ಹಾಗೂ ಕಾರುಗಳಲ್ಲಿ ಹೋಗುತ್ತಿದ್ದ ಸಾಕಷ್ಟು ಮಂದಿ ಮಾಸ್ಕ್ ಧರಿಸಿರಲಿಲ್ಲ. ಅವರಿಗೆ ಅಧಿಕಾರಿಗಳು ಸ್ಥಳದಲ್ಲೇ ತಲಾ ₹ 100 ದಂಡ ವಿಧಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ ಕಳುಹಿಸಿದರು.

‘ಕೊರೊನಾ ಸೋಂಕು ತಡೆಗೆ ಸರ್ಕಾರ ಜಾರಿಗೊಳಿಸಿರುವ ಸುರಕ್ಷತಾ ಮಾರ್ಗಸೂಚಿಯನ್ನು ಗ್ರಾಮದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದೇವೆ. ಮಾಸ್ಕ್ ಧರಿಸಿದವರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುತ್ತೇವೆ’ ಎಂದು ಶಿವರಾಜ್ ತಿಳಿಸಿದರು.

‘ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೋವಿಡ್ ಸುರಕ್ಷತಾ ಮಾರ್ಗಸೂಚಿ ರೂಪಿಸಿದ್ದು, ಇದನ್ನು ಪ್ರತಿಯೊಬ್ಬರು ಪಾಲಿಸಬೇಕು’ ಎಂದು ಕಿವಿಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.