ಕೋಲಾರ: ತಾಲ್ಲೂಕಿನ ಪಾರ್ಶ್ವಗಾನಹಳ್ಳಿಯ ರೈತರೊಬ್ಬರ ಜಮೀನಿನಲ್ಲಿ ಗುರುವಾರ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು ₹ 5 ಲಕ್ಷ ರೂಪಾಯಿ ಮೌಲ್ಯದ ರಾಗಿ ಬೆಳೆ ಸುಟ್ಟು ಭಸ್ಮವಾಗಿದೆ.

ಗ್ರಾಮದ ರೈತ ಮುನಿಯಪ್ಪ ಅವರ ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದು ಈ ಅನಾಹುತ ಸಂಭವಿಸಿದೆ. ತುಂಡಾಗಿ ಬಿದ್ದ ವಿದ್ಯುತ್ ತಂತಿ ನೆಲಕ್ಕೆ ತಾಗಿ ಶಾರ್ಟ್ ಸರ್ಕಿಟ್ ಸಂಭವಿಸಿ ರಾಗಿ ಕಂತೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಕಂತೆಗಳು ಸಂಪೂರ್ಣ ಸುಟ್ಟು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತುಂಬಾ ಹಳೆಯವಾಗಿದ್ದವು. ಹೀಗಾಗಿ ವಿದ್ಯುತ್ ಬದಲಿಸುವಂತೆ ಬೆಸ್ಕಾಂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದೆವು. ಆದರೆ, ಸಿಬ್ಬಂದಿ ಮನವಿಗೆ ಸ್ಪಂದಿಸಿರಲಿಲ್ಲ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಅಗ್ನಿ ಅವಘಡಕ್ಕೆ ಕಾರಣ’ ಎಂದು ಮುನಿಯಪ್ಪ ಆರೋಪಿಸಿದರು.

ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.