ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜೊಂದರ ಹಾಸ್ಟೆಲ್ನ ಸುಮಾರು 41 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ವಿದ್ಯಾರ್ಥಿಗಳು ಈರುಳ್ಳಿ ದೋಸೆ, ಚಟ್ನಿ ಹಾಗೂ ಆಲೂ ಸಾಗು ಸೇವಿಸಿದ್ದಾರೆ. ಮುಂಜಾನೆ ವೇಳೆಗೆ ಹೊಟ್ಟೆ ನೋವು ಕಾಣಿಸಿಕೊಂಡು ವಾಂತಿ ಹಾಗೂ ಭೇದಿಯಾಗಿದೆ. ತಕ್ಷಣವೇ ಎಲ್ಲರನ್ನೂ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯಕ್ಕೆ ಕಾರಣವಾದ ಈ ವಿಚಾರವನ್ನು ಕೆಲ ವಿದ್ಯಾರ್ಥಿಗಳು ಹೇಳಿಕೊಂಡರು.

ಒಬ್ಬ ಉಪನ್ಯಾಸಕ ಕೂಡ ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 41 ಮಂದಿಯಲ್ಲಿ ಬಹುತೇಕರು ಚೇತರಿಸಿಕೊಳ್ಳುತ್ತಿದ್ದಾರೆ. ಪೂರ್ಣ ಚೇತರಿಸಿಕೊಂಡಿರುವ ನಾಲ್ಕೈದು ಮಂದಿ ಈಗಾಗಲೇ ಆಸ್ಪತ್ರೆಯಿಂದ ತೆರಳಿದ್ದಾರೆ.

ಈ ಹಾಸ್ಟೆಲ್ನಲ್ಲಿ ಒಟ್ಟು 61 ಮಂದಿ ಇದ್ದಾರೆ. ಇವರು ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದಲ್ಲಿ ಓದುತ್ತಿದ್ದಾರೆ. ಅಸ್ವಸ್ಥಗೊಂಡವರಲ್ಲಿ ವಿದ್ಯಾರ್ಥಿನಿಯೂ ಇದ್ದಾರೆ.

ಆಹಾರ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದರು. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಉಂಟಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ 24 ಗಂಟೆ ನಿಗಾ ಇಡಲು ಸೂಚಿಸಲಾಗಿದೆ ಎಂದರು.

ಹಾಸ್ಟೆಲ್ನಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣೆಯ ಪ್ರಕ್ರಿಯೆಯ ಕುರಿತು ಆಹಾರ ಸುರಕ್ಷತಾ ಇಲಾಖೆ ಅಂಕಿತಾಧಿಕಾರಿ ಡಾ.ರಾಕೇಶ್ ತಪಾಸಣೆ ನಡೆಸಿದರು. ಬಳಿಕ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದರು.

ವಿಷಯ ಗೊತ್ತಾಗಿ ವಿದ್ಯಾರ್ಥಿಗಳ ಪೋಷಕರು, ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಹಲವಾರು ಪೋಷಕರು ಆಸ್ಪತ್ರೆಗೆ ಧಾವಿಸಿ ತಮ್ಮ ಮಕ್ಕಳ ಆರೋಗ್ಯ ವಿಚಾರಿಸಿದರು. ಪೊಲೀಸರು ಆಸ್ಪತ್ರೆಗೆ ಬಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ತಹಶೀಲ್ದಾರ್ ಡಾ.ನಯನಾ ಮತ್ತು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಡಾ.ನಯನಾ ಕಾಲೇಜಿನ ಹಾಸ್ಟೆಲ್ಗೂ ತೆರಳಿದ್ದರು. ಯಾವುದೇ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಗುತ್ತಿಗೆದಾರನನ್ನು ವಿಚಾರಿಸಿದರು. ಆಹಾರ ಮಾದರಿಯನ್ನು ಪರೀಕ್ಷೆಗೆಂದು ಕಳಿಸಿದ್ದು, ವರದಿ ಬಂದ ಬಳಿಕ ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು. ಕೋಲಾರ ಗ್ರಾಮಾಂತರ ಪೊಲೀಸರು ಅಡುಗೆ ಗುತ್ತಿಗೆದಾರ ಹಾಗೂ ವಾರ್ಡನ್ನನ್ನು ವಿಚಾರಣೆ ನಡೆಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯು ಈ ಘಟನೆ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದೆ. ಜೊತೆಗೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಕ್ರಮ ವಹಿಸುವುದಾಗಿಯೂ ಹೇಳಿದೆ.

ಆಸ್ಪತ್ರೆಗೆ ಒಟ್ಟು 41 ವಿದ್ಯಾರ್ಥಿಗಳು ದಾಖಲಾಗಿದ್ದು ನಮ್ಮ ಸಿಬ್ಬಂದಿ ಚಿಕಿತ್ಸೆ ನೀಡಿದರು. ಯಾವುದೇ ಅಪಾಯ ಇಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲವರು ಆಸ್ಪತ್ರೆಯಿಂದ ತೆರಳಿದ್ದಾರೆ

ಡಾ.ಜಗದೀಶ್ ಜಿಲ್ಲಾ ಸರ್ಜನ್ ಎಸ್ಎನ್ಆರ್ ಜಿಲ್ಲಾಸ್ಪತ್ರೆ

ಪರೀಕ್ಷೆಗೆ ಆಹಾರ ಮಾದರಿ ಸಂಗ್ರಹ

‘ಹಾಸ್ಟೆಲ್ಗೆ ತೆರಳಿ ಪರಿಶೀಲನೆ ನಡೆಸಿದೆವು. ಕಲರ್ ಬೋಟಿ ಅಕ್ಕಿ ಸಕ್ಕರೆ ನೀರು ಉದ್ದಿನ ಬೇಳೆ ಈರುಳ್ಳಿ ಸೇರಿದಂತೆ ವಿವಿಧ ಅಹಾರ ಮಾದರಿ ಸಂಗ್ರಹಿಸಿದ್ದೇವೆ. ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಿಕೊಡುತ್ತೇವೆ. ಹಾಸ್ಟೆಲ್ನ ಅಡುಗೆ ಮನೆ ಬಂದ್ ಮಾಡಿದ್ದು ಮುಂದಿನ ಆದೇಶ ಬರುವವರೆಗೆ ತೆರೆಯುವಂತಿಲ್ಲ. ಮಹಜರ್ ಕೂಡ ಮಾಡಿದ್ದೇವೆ’ ಎಂದು ಆಹಾರ ಸುರಕ್ಷಿತ ಇಲಾಖೆ ಅಂಕಿತಾಧಿಕಾರಿ ಡಾ.ರಾಕೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.