ಶುಕ್ರವಾರ, ಜೂನ್ 25, 2021
29 °C

ರಾಸುಗಳಿಗೆ ಕಾಲು ಬಾಯಿ ಜ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ಪುರಹಳ್ಳಿಯಲ್ಲಿ 4 ರಾಸುಗಳಿಗೆ ಕಾಲುಬಾಯಿ ಜ್ವರ ತಗುಲಿದ್ದು, ಪಶು ವೈದ್ಯರು ಗ್ರಾಮಕ್ಕೆ ಮಂಗಳವಾರ ಭೇಟಿ ಕೊಟ್ಟು ರಾಸುಗಳಿಗೆ ಚಿಕಿತ್ಸೆ ನೀಡಿದ್ದಾರೆ.

ಗ್ರಾಮದಲ್ಲಿ ಸುಮಾರು 60 ರಾಸುಗಳಿದ್ದು, ಈ ಪೈಕಿ ಕೆಲ ರಾಸುಗಳಲ್ಲಿ ಇತ್ತೀಚೆಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ಕಾಯಿಲೆ ಪೀಡಿತ ರಾಸುಗಳು ಮೇವು ತಿನ್ನುವುದನ್ನು ನಿಲ್ಲಿಸಿದ್ದವು. ಈ ಬಗ್ಗೆ ಗ್ರಾಮದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಸಂಗತಿ ತಿಳಿದ ವೇಮಗಲ್‌ ಪಶು ಆಸ್ಪತ್ರೆ ವೈದ್ಯರು ಗ್ರಾಮಕ್ಕೆ ತೆರಳಿ ರಾಸುಗಳಿಗೆ ಲಸಿಕೆ ನೀಡಿದ್ದಾರೆ.

ಜತೆಗೆ ಜಿಲ್ಲಾ ಕೇಂದ್ರದಿಂದ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಸಿಬ್ಬಂದಿ ತಂಡವನ್ನು ಪುರಹಳ್ಳಿಗೆ ಕಳುಹಿಸಿ ಕಾಲುಬಾಯಿ ಜ್ವರ ಹರಡುವಿಕೆ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲಾಯಿತು. ಅಲ್ಲದೇ, ಗ್ರಾಮದಲ್ಲಿ ಸೋಂಕು ನಿವಾರಕ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.