ಮಂಗಳವಾರ, ಜೂನ್ 22, 2021
24 °C

ಮತ್ತೆ 6 ಮಂದಿಗೆ ಶಿಲೀಂಧ್ರ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 6 ಮಂದಿಯಲ್ಲಿ ಶಿಲೀಂಧ್ರ ಸೋಂಕಿನ (ಬ್ಲ್ಯಾಕ್ ಫಂಗಸ್‌) ಲಕ್ಷಣ ಕಾಣಿಸಿಕೊಂಡಿದೆ.

ಕಳೆದ ವಾರ 12 ಮಂದಿಯಲ್ಲಿ ಈ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕೋವಿಡ್‌–19 ಸಾವಿನ ದವಡೆಯಿಂದ ಪಾರಾಗಿ ಮನೆಗೆ ಮರಳಿದವರಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ.

‘ಜಿಲ್ಲೆಯಲ್ಲಿ ಒಟ್ಟಾರೆ 18 ಮಂದಿಯಲ್ಲಿ ಶಿಲೀಂಧ್ರ ಸೋಂಕಿನ ಲಕ್ಷಣ ಕಾಣಿಸಿಕೊಂಡಿವೆ. ಈ ಪೈಕಿ 5 ಮಂದಿಗೆ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಉಳಿದ 13 ಮಂದಿಯ ವರದಿ ಬರಬೇಕಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

‘ಶಿಲೀಂಧ್ರ ಸೋಂಕಿತರ ಚಿಕಿತ್ಸೆಗೆ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ 30 ಬೆಡ್‌ ಕಾಯ್ದಿರಿಸಲಾಗಿದೆ. ಸೋಂಕು ದೃಢಪಟ್ಟಿರುವ 5 ಮಂದಿಗೆ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು