ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರು ರಾಜಕೀಯದಿಂದ ದೂರವಿರಿ: ಶ್ರೀನಿವಾಸಚಾರಿ

Published 2 ಅಕ್ಟೋಬರ್ 2023, 13:20 IST
Last Updated 2 ಅಕ್ಟೋಬರ್ 2023, 13:20 IST
ಅಕ್ಷರ ಗಾತ್ರ

ಮುಳಬಾಗಿಲು: ನಗರದ ಡಿವಿಜಿ ಶಾಲೆಯಲ್ಲಿ ಸೋಮವಾರ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ನಡೆಯಿತು.

ಇದೇ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ್ ಹಾಗೂ ದಾನಿಗಳಿಂದ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ಲೋಟ ವಿತರಣೆ ನಡೆಯಿತು.

ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಚಾರಿ ಮಾತನಾಡಿ‌, ‘ಇತ್ತೀಚಿನ ದಿನಗಳಲ್ಲಿ ಕೆಲ ಶಿಕ್ಷಕರು ರಾಜಕಾರಣ ಮತ್ತು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ. ಇದಕ್ಕಾಗಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಶಾಲಾ ಸಮಯದಲ್ಲಿ ತಿರುಗಾಡುತ್ತಾ ಇರುತ್ತಾರೆ. ಇದು ಬಾರಿ ನೋವಿನ ಸಂಗತಿ’ ಎಂದು ಬೇಸರಿಸಿದರು.

ಶಿಕ್ಷಕರು ರಾಜಕೀಯದಿಂದ ಅಂತರ ಕಾಪಡಿಕೊಂಡು, ಮಕ್ಕಳನ್ನು ಸರಿದಾರಿಯಲ್ಲಿ ನಡೆಸಬೇಕು ಎಂದು ಹೇಳಿದರು.

ಬಿಇಒ ಗಂಗರಾಮಯ್ಯ ಮಾತನಾಡಿ, ಸತ್ಯ ಮತ್ತು ಅಹಿಂಸೆ ತತ್ವದಡಿ ದೇಶವನ್ನು ಮುನ್ನಡೆಸಿದ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಆದರ್ಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಾಲಿಸಬೇಕು ಎಂದರು.

ಓಸ್ಯಾಟ್ ಸಂಸ್ಥೆ ಶಾಲಾ ಆವರಣದಲ್ಲಿ ನಿರ್ಮಿಸಿರುವ ಗ್ರಂಥಾಲಯವನ್ನು ಶಾಲೆಗೆ ಹಸ್ತಾಂತರಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಂಕರ್ ನಾರಾಯಣ, ನಿರಂಜನ್, ಜಯರಾಮ್, ಕನ್ನಡ ಸಂಘದ ಅಧ್ಯಕ್ಷ ಮಧುಸೂದನ್, ನಗರ ಸಭೆ ಸದಸ್ಯ ರಾಜಶೇಖರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆನಂದ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಹುಸೇನ್, ಮುಖ್ಯ ಶಿಕ್ಷಕ ಸೊಣ್ಣಪ್ಪ, ತಾಲ್ಲೂಕು ಪದವೀಧರ ಸಂಘದ ಗೌರವಾಧ್ಯಕ್ಷ ಅಶೋಕ್, ಸಿಆರ್‌ಪಿ ಬ್ರಹ್ಮಾನಂದ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT