ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

Last Updated 2 ನವೆಂಬರ್ 2019, 13:58 IST
ಅಕ್ಷರ ಗಾತ್ರ

ಕೋಲಾರ: ಮಹಾತ್ಮ ಗಾಂಧೀಜಿಯ 150ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಇಲ್ಲಿನ ಟಿ.ಚನ್ನಯ್ಯ ರಂಗಮಂದಿರದ ಆವರಣದಲ್ಲಿ ಹಮ್ಮಿಕೊಂಡಿರುವ ಗಾಂಧೀಜಿ ಜೀವನ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ಗಾಂಧೀಜಿ ಅವರಿಗೂ ಮತ್ತು ಕೋಲಾರ ಜಿಲ್ಲೆಗೂ ನಂಟಿದೆ. ಗಾಂಧೀಜಿಯು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಗಾಗಿ ಅವಿಭಜಿತ ಕೋಲಾರ ಜಿಲ್ಲೆಯ ನಂದಿ ಗಿರಿಧಾಮಕ್ಕೆ ಭೇಟಿ ನೀಡಿದ್ದರು. ಅಲ್ಲದೇ, ಅಲ್ಲಿಯೇ ಪ್ರಾರ್ಥನ ಸಭೆ ನಡೆಸಿದ್ದರು’ ಎಂದು ವಿವರಿಸಿದರು.

‘ಗಾಂಧೀಜಿ ದೇಶದ ಒಳಿತಿಗಾಗಿ ಸಾಕಷ್ಟು ಕನಸು ಕಂಡಿದ್ದರು. ಅವರ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಪಣ ತೊಡಬೇಕು. ಜಿಲ್ಲಾ ಕೇಂದ್ರದಲ್ಲಿನ ಕಸದ ಸಮಸ್ಯೆ ಬಗೆಹರಿಸಿ ಕೋಲಾರವನ್ನು ಸುಂದರ ನಗರವಾಗಿಸಲು ಸಾರ್ವಜನಿಕರು ಹಾಗೂ ನಗರಸಭೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳು ಗಾಂಧೀಜಿ ಆಶಯ ಈಡೇರಿಸಬೇಕು. ಅವರ ಜೀವನ ಚರಿತ್ರೆ ಬಗ್ಗೆ ಯುವಕ ಯುವತಿಯರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ 3 ದಿನಗಳ ಕಾಲ ಈ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಬೇಕು’ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ವಾರ್ತಾಧಿಕಾರಿ ರಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT