ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಪ್ರೇರಿತರಾಗಿ ಕೋವಿಡ್ ಲಸಿಕೆ ಪಡೆಯಿರಿ

Last Updated 5 ಅಕ್ಟೋಬರ್ 2021, 16:27 IST
ಅಕ್ಷರ ಗಾತ್ರ

ಕೋಲಾರ: ‘ಒಂದೂವರೆ ವರ್ಷದಿಂದ ಕೋವಿಡ್ ಇಡೀ ವಿಶ್ವವನ್ನೇ ಬಾಧಿಸುತ್ತಿದ್ದು, ಅನೇಕ ಜನರು ಸಾವಿಗೀಡಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಯೊಬ್ಬರು ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದುಕೊಂಡರೆ ಕೊರೊನಾ ನಿಯಂತ್ರಿಸಬಹುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘದಲ್ಲಿ ತಾಲ್ಲೂಕಿನ ನರಸಾಪುರ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಾಗೃತಿ ಮತ್ತು ಅಪರಿಮಿತ ಕಾನೂನು ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

‘ಈಗಾಗಲೇ ಪ್ರತಿಯೊಬ್ಬರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರ ಅನೇಕ ಕಾರ್ಯಕ್ರಮಗಳ ಮೂಲಕ ಪ್ರಚಾರ ನಡೆಸುತ್ತಿದೆ. ಪ್ರತಿಯೊಬ್ಬರು ತಪ್ಪದೆ ಲಸಿಕೆ ಪಡೆದುಕೊಳ್ಳಿ ಹಾಗೂ ಸರ್ಕಾರದ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ’ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ವಿವೇಕ್ ಗ್ರಾಮೋಪಾಧ್ಯಾಯ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮ್ಯಾ ದೀಪಿಕಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ರಘುಪತಿಗೌಡ, ನರಸಾಪುರ ಗ್ರಾ.ಪಂ ಅಧ್ಯಕ್ಷೆ ಸುಮಿತ್ರಾ, ಪಿಡಿಒ ಎಚ್‌.ಎಂ.ರವಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT