ಶನಿವಾರ, ಸೆಪ್ಟೆಂಬರ್ 25, 2021
24 °C

ಕೋಲಾರ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಹೋಬಳಿ ವ್ಯಾಪ್ತಿಯಲ್ಲಿ ವಿವಾಹಿತನೊಬ್ಬ 16 ವರ್ಷದ ಬಾಲಕಿ ಮೇಲೆ ಮಂಗಳವಾರ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಪ್ರಕರಣ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದು, ಪೊಲೀಸರು ಆರೋಪಿ ಮಂಜುನಾಥ್‌ನ (27) ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ಮತ್ತು ತಾಯಿ 2 ದಿನದ ಹಿಂದೆ ತಮಿಳುನಾಡಿಗೆ ಹೋಗಿದ್ದರು. ಹೀಗಾಗಿ ಬಾಲಕಿ ಮತ್ತು ಆಕೆಯ ತಂಗಿ ಮಾತ್ರ ಮನೆಯಲ್ಲಿದ್ದರು. ಈ ಸಂಗತಿ ತಿಳಿದಿದ್ದ ಆರೋಪಿ ಮಂಜುನಾಥ್‌ ಬೆಳಿಗ್ಗೆ ಏಕಾಏಕಿ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ರಕ್ಷಣೆಗಾಗಿ ಚೀರಿಕೊಂಡಾಗ ಆರೋಪಿಯು ಆಕೆಯ ಕುತ್ತಿಗೆಗೆ ಸೀರೆ ಬಿಗಿದು ಕೊಲೆ ಮಾಡಿ ನೇಣು ಹಾಕಿ ಪರಾರಿಯಾಗಿದ್ದಾನೆ ಎಂದು ಮಾಸ್ತಿ ಪೊಲೀಸರು ತಿಳಿಸಿದ್ದಾರೆ.

ಘಟನಾ ಸಂದರ್ಭದಲ್ಲಿ ಪಕ್ಕದಲ್ಲೇ ಚಿಕ್ಕಮ್ಮನ ಮನೆಯಲ್ಲಿದ್ದ ಸಂತ್ರಸ್ತ ಬಾಲಕಿಯ ತಂಗಿಯು ಮಂಜುನಾಥ್‌ ಓಡಿ ಹೋಗುವುದನ್ನು ನೋಡಿದ್ದಾಳೆ. ಚಿಕ್ಕಮ್ಮ ಸಹ ಆತನನ್ನು ನೋಡಿದ್ದಾರೆ. ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕೊಲೆ ಆರೋಪದಡಿ ಮಂಜುನಾಥ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು