ಮಂಗಳವಾರ, ಅಕ್ಟೋಬರ್ 27, 2020
28 °C

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ರೈತಸಂಘದ ಉಪತಹಶೀಲ್ದಾರ್ ಸಂಪತ್ ಅವರಿಗೆ ರೈತ ಸಂಘದ ಸದಸ್ಯರು ಮನವಿ ಮಾಡಿದರು.

ರೈತ ಸಂಘದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಮಹಿಳೆಯರಿಗೆ ರಕ್ಷಣೆ ಇಲ್ಲ. ಮಹಿಳೆಯರ ರಕ್ಷಣೆಗೆ ಅನೇಕ ಕಾನೂನು ಇದ್ದರೂ ದೌರ್ಜನ್ಯ ತಡೆಯಲು ಸಾಧ್ಯವಾಗಿಲ್ಲ.  ಹೀಗಾಗಿ ಇಂತಹ ಘಟನೆಗಳು ನಡೆದ ಕೂಡಲೇ ಆರೋಪಿಗಳನ್ನು ಬಂಧಿಸಿ, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಫಾರೂಕ್‌ಪಾಷ ಮಾತನಾಡಿದರು.

ಉಪತಹಶೀಲ್ದಾರ್ ಸಂಪತ್ ಅವರು, ‘ಹಿರಿಯ ಅಧಿಕಾರಿಗಳ ಮೂಲಕ ಕೂಡಲೇ ತಮ್ಮ ಮನವಿಯನ್ನು ರಾಷ್ಟ್ರಪತಿಗೆ ಕಳುಹಿಸುತ್ತೇನೆ’ ಎಂದರು.

ಮನವಿ ನೀಡುವಾಗ ಈಕಂಬಳ್ಳಿ ಮಂಜುನಾಥ್, ವಿಜಯ್‌ಪಾಲ, ಸುಪ್ರೀಂಚಲ, ವಿಶ್ವನಾಥ್, ಪುತ್ತೇರಿ ರಾಜು, ಮನೋಜ್, ಕಾರ್ತಿಕ್‌, ಮಣಿ, ನವೀನ್, ವೇಣು, ಆದರ್ಶ್‌, ಸಿದ್ಧಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು