ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು: ದೇವಾಲಯ ಬೀಗ ಮುರಿದು ಕಳ್ಳತನ

Published 4 ಮೇ 2024, 15:44 IST
Last Updated 4 ಮೇ 2024, 15:44 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ಸಂಗಸಂದ್ರ ಗ್ರಾಮದ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ ಮತ್ತು ಬಂಗಾರವನ್ನು ಶುಕ್ರವಾರ ರಾತ್ರಿ ಕಳ್ಳರು ಕಳ್ಳತನ ಮಾಡಿದ್ದಾರೆ.  

ದೇವಾಲಯದ ಬೀಗ ಹೊಡೆದು ಕಳ್ಳರು ಒಳಗೆ ನುಗ್ಗಿ ಹುಂಡಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಧ್ವಂಸಗೊಳಿಸಿ ಹುಂಡಿಯಲ್ಲಿದ್ದ ಸುಮಾರು ₹10 ರಿಂದ ₹15 ಸಾವಿರ ನಗದು ಹಾಗೂ ಐದು ಗ್ರಾಂ ಬಂಗಾರದ ತಾಳಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ರಾಜಸ್ವ ನಿರೀಕ್ಷಕ ಶ್ರೀನಿವಾಸ್, ಗ್ರಾಮ ಲೆಕ್ಕಾಧಿಕಾರಿ ಪ್ರಿಯಾಂಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT