ಬುಧವಾರ, ಅಕ್ಟೋಬರ್ 28, 2020
18 °C

ಉತ್ತಮ ಫಲಿತಾಂಶ: ಶಿಕ್ಷಕರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿ ಸಾಧನೆ ಮಾಡಲು ಮಕ್ಕಳಿಗೆ ಪ್ರೇರಣೆ ನೀಡಿದ ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ನಗರದಲ್ಲಿ ಬುಧವಾರ ಸನ್ಮಾನಿಸಿದರು.

‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನದಲ್ಲಿದೆ. ಇದರ ಹಿಂದೆ ಇಲಾಖೆಯ ಜತೆಗೆ ಎಲ್ಲಾ ಶಿಕ್ಷಕರು, ಮುಖ್ಯಶಿಕ್ಷಕರ ಪರಿಶ್ರಮವಿದೆ. ಪ್ರೌಢ ಶಾಲಾ ಶಿಕ್ಷಕರು ಹೆಚ್ಚಿನ ಮುತುವರ್ಜಿಯಿಂದ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಿಂದಲೂ 19 ಶಾಲೆಗಳು ಹೆಚ್ಚುವರಿಯಾಗಿ ಶೇ 100ರ ಫಲಿತಾಂಶ ಸಾಧನೆ ಗೌರವಕ್ಕೆ ಪಾತ್ರವಾಗಿವೆ. ಈ ಪೈಕಿ 10 ಸರ್ಕಾರಿ ಶಾಲೆಗಳು ಸೇರಿರುವುದು ಸಂತಸದ ವಿಷಯ’ ಎಂದು ಹೇಳಿದರು.

‘ಕೋವಿಡ್–19 ಸಂಕಷ್ಟದ ಪರಿಸ್ಥಿತಿಯಲ್ಲೂ ಶಿಕ್ಷಕರು ವಿದ್ಯಾಗಮ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದೀರಿ. ಫಲಿತಾಂಶ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಸವಾಲು ಎದುರಿಸಬೇಕಾಗಿದ್ದು, ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯ ಮುರಳಿಮೋಹನ್, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು