ಕೋಲಾರ: ‘ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.20 ಮತ್ತು 21ರಂದು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ನೌಕರರು ಭಾಗವಹಿಸಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ಹೇಳಿದರು.

ಇಲ್ಲಿ ಭಾನುವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿ. ‘ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಇಲಾಖೆ ಮುಖ್ಯಸ್ಥರಿಂದ ಅನುಮತಿ ಪತ್ರ ಪಡೆದು ಅಧಿಕೃತ ಗುರುತಿನಚೀಟಿ ಸಲ್ಲಿಸಿ ಭಾಗವಹಿಸಬೇಕು. ನೌಕರರು ಕ್ರೀಡಾಕೂಟ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕು. ಸಂಘದ ಇತಿಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಸಂಘ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಇಲಾಖೆ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಮಂಜುನಾಥ್ ಅವರನ್ನು ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿ ನೇಮಕ ಪತ್ರ ನೀಡಲಾಯಿತು. ಸಂಘದ ಗೌರವಾಧ್ಯಕ್ಷ ಆರ್.ಅನಿಲ್‌ಕುಮಾರ್, ಉಪಾಧ್ಯಕ್ಷರಾದ ಎಸ್.ನಂದೀಶ್‌ಕುಮಾರ್, ಜಿ.ಶ್ರೀನಿವಾಸ್, ಕಾರ್ಯದರ್ಶಿ ವಿ.ಮುರಳಿಮೋಹನ್, ಆಂತರಿಕ ಲೆಕ್ಕಪರಿಶೋಧಕ ಅನಿಲ್, ಕಾರ್ಯಕಾರಿ ಸಮಿತಿ ಸದಸ್ಯ ಬಿ.ಆನಂದ್, ತಾಲ್ಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.