ಬುಧವಾರ, ಫೆಬ್ರವರಿ 26, 2020
19 °C

20ಕ್ಕೆ ಸರ್ಕಾರಿ ನೌಕರರ ಕ್ರೀಡಾಕೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.20 ಮತ್ತು 21ರಂದು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ನೌಕರರು ಭಾಗವಹಿಸಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ಹೇಳಿದರು.

ಇಲ್ಲಿ ಭಾನುವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿ. ‘ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಇಲಾಖೆ ಮುಖ್ಯಸ್ಥರಿಂದ ಅನುಮತಿ ಪತ್ರ ಪಡೆದು ಅಧಿಕೃತ ಗುರುತಿನಚೀಟಿ ಸಲ್ಲಿಸಿ ಭಾಗವಹಿಸಬೇಕು. ನೌಕರರು ಕ್ರೀಡಾಕೂಟ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕು. ಸಂಘದ ಇತಿಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಸಂಘ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಇಲಾಖೆ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಮಂಜುನಾಥ್ ಅವರನ್ನು ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿ ನೇಮಕ ಪತ್ರ ನೀಡಲಾಯಿತು. ಸಂಘದ ಗೌರವಾಧ್ಯಕ್ಷ ಆರ್.ಅನಿಲ್‌ಕುಮಾರ್, ಉಪಾಧ್ಯಕ್ಷರಾದ ಎಸ್.ನಂದೀಶ್‌ಕುಮಾರ್, ಜಿ.ಶ್ರೀನಿವಾಸ್, ಕಾರ್ಯದರ್ಶಿ ವಿ.ಮುರಳಿಮೋಹನ್, ಆಂತರಿಕ ಲೆಕ್ಕಪರಿಶೋಧಕ ಅನಿಲ್, ಕಾರ್ಯಕಾರಿ ಸಮಿತಿ ಸದಸ್ಯ ಬಿ.ಆನಂದ್, ತಾಲ್ಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)