ಗುರುವಾರ , ಆಗಸ್ಟ್ 13, 2020
22 °C

ಸರ್ಕಾರದ ಅಮಾನವೀಯ ನಡೆ: ರಮೇಶ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ’ ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರಕ್ಕೆ ತಿಳಿವಳಿಕೆ ಕೊರತೆಯಿದೆ. ಸೋಂಕಿತರ ಅಂತ್ಯಕ್ರಿಯೆ ವಿಚಾರದಲ್ಲಿ ಬೇಜವಾಬ್ದಾರಿ ತೋರುತ್ತಿದೆ. ಈ ಬೇಜವಾಬ್ದಾರಿ ನಡೆಯಿಂದ ಜನರಲ್ಲಿ ಜಾಗೃತಿ ಬದಲಿಗೆ ಹೆದರಿಕೆ ಬಂದಿದೆ. ಕೊರೊನಾ ವಾರಿಯರ್ಸ್ ಸಹ ಆತಂಕಗೊಂಡಿದ್ದಾರೆ. ಬಂಧು ಬಳಗ, ರಕ್ತ ಸಂಬಂಧ, ಮಾನವೀಯತೆ ಸತ್ತು ಹೋಗಿದೆ’ ಎಂದು ಮಾರ್ಮಿಕವಾಗಿ ನುಡಿದರು.

‘ಆರೋಗ್ಯ ಇಲಾಖೆ ಸಿಬ್ಬಂದಿಯು ಕಾಯಿಲೆಗಿಂತ ಹೆಚ್ಚಾಗಿ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ಸೋಂಕಿತರ ಸಾವು ಸಂಭವಿಸಿದಾಗ ವ್ಯವಸ್ಥಿತವಾಗಿ ಅಂತ್ಯಕ್ರಿಯೆ ನಡೆಸಬೇಕು. 15 ಅಡಿ ಆಳದ ಗುಂಡಿ ತೆಗೆದು ಗೌರವಯುತವಾಗಿ ಅಂತ್ಯಕ್ರಿಯೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಸಚಿವರ ಅಥವಾ ಜನಪ್ರತಿನಿಧಿಗಳ ರಕ್ತ ಸಂಬಂಧಿಗಳಲ್ಲಿ ಯಾರಾದರೂ ಕೊರೊನಾ ಸೋಂಕಿನಿಂದ ಮೃತಪಟ್ಟರೆ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆಯೇ? ತಾನು ಮಂತ್ರಿ, ಸರ್ಕಾರವೆಂಬ ಅಹಂ ಬಿಡಬೇಕು. ಅಧಿಕಾರ ಶಾಶ್ವತವಲ್ಲ, ಮಾನವೀಯತೆ ಶಾಶ್ವತ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು