ಸೋಮವಾರ, ಏಪ್ರಿಲ್ 12, 2021
26 °C

ಗೋಮಾಳ ಒತ್ತುವರಿ ವಿರುದ್ಧ ಪ್ರಕರಣ ದಾಖಲಿಸಿ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಭೂಗಳ್ಳರು ಮತ್ತು ಪ್ರಭಾವಿ ವ್ಯಕ್ತಿಗಳಿಗೆ ಸಹಕರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೇವೆಯಿಂದ ಅಮಾನತು ಮಾಡಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಆರ್.ಅಶ್ವತ್ಥನಾರಾಯಣ ಒತ್ತಾಯಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭೂಗಳ್ಳರ ಪರವಾಗಿ ಕೆಲಸ ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಸೆಲ್ವಮಣಿ ಅವರಿಗೆ ದೂರು ಕೊಡುತ್ತೇವೆ’ ಎಂದರು ಹೇಳಿದರು.

‘ಮಾಲೂರು ತಾಲ್ಲೂಕಿನ ರಾಮಪುರ ಗ್ರಾಮದಲ್ಲಿನ ಸರ್ಕಾರಿ ಗೋಮಾಳದ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಆ ಜಮೀನಿಗೆ ನಕಲಿ ದಾಖಲೆಪತ್ರ ಸೃಷ್ಟಿಸಿಕೊಟ್ಟಿದ್ದಾರೆ. ಒತ್ತುವಾರಿದಾರರು ಹಾಗೂ ಅಧಿಕಾರಿಗಳು ಒಟ್ಟಾಗಿ ರೈತರಿಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಅಧಿಕಾರಿಗಳು ಹಣ ಸಂಪಾದನೆಗಾಗಿ ರಾತ್ರೋರಾತ್ರಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ನೋಂದಣಿ ಮಾಡಿಕೊಡುತ್ತಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು. ಗೋಮಾಳದ ಒತ್ತುವರಿ ತೆರವು ಮಾಡಬೇಕು’ ಎಂದು ಮನವಿ ಮಾಡಿದರು.

ಸಮಿತಿಯ ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ವೆಂಕಟೇಶ್, ಸದಸ್ಯರಾದ ಪ್ರಕಾಶ್‌ರೆಡ್ಡಿ, ಗ್ರಾ.ಪಂ ಮಾಜಿ ಅಧ್ಯಕ್ಷ ಕರೀಗೌಡ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.