ಮಂಗಳವಾರ, ಏಪ್ರಿಲ್ 20, 2021
25 °C

ಗ್ರಾ.ಪಂ: ಉಪ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ವಿವಿಧ ಕಾರಣಕ್ಕೆ ಚುನಾವಣೆ ನಡೆಯದೆ ಖಾಲಿ ಉಳಿದಿರುವ ಗ್ರಾಮ ಪಂಚಾಯಿತಿ ವಿವಿಧ ಕ್ಷೇತ್ರಗಳ ಸದಸ್ಯ ಸ್ಥಾನದ ಉಪ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಚುನಾವಣೆ ನಡೆಯದೆ ಖಾಲಿ ಇರುವ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ 2 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ.

ಮಾಲೂರು ತಾಲ್ಲೂಕಿನ ಕಂಬೀಪುರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಅಬ್ಬೇನಹಳ್ಳಿ ಗ್ರಾ.ಪಂ 1 ಸ್ಥಾನಕ್ಕೆ (ಹಿಂದುಳಿದ ವರ್ಗ ಎ–ಮಹಿಳಾ ಮೀಸಲಾತಿ) ಮತ್ತು ಮುಳಬಾಗಿಲು ತಾಲ್ಲೂಕಿನ ಮಲ್ಲಸಂದ್ರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಉತ್ತನೂರು ಗ್ರಾ.ಪಂ 1 ಸ್ಥಾನಕ್ಕೆ (ಅನುಸೂಚಿತ ಜಾತಿ) ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಮಾರ್ಚ್ 19 ಕಡೆಯ ದಿನ. ಮಾರ್ಚ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 22 ಕಡೆಯ ದಿನವಾಗಿದೆ. ಮಾರ್ಚ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಆಯಾ ತಾಲ್ಲೂಕು ಕೇಂದ್ರದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.