ಕೋಲಾರ: ತಾಲ್ಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅವರು ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುಷ್ಮಾ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗೇಶ್ ಹಾಗೂ ಸದಸ್ಯ ವಿಜಯ್ಕುಮಾರ್ ಅವರ ಕಿರುಕುಳದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪುಷ್ಪಾ ಅವರು ಆತ್ಮಹತ್ಯೆಗೆ ಯತ್ನಿಸುವುದಕ್ಕೂ ಮುನ್ನ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನಾಗೇಶ್ ಮತ್ತು ವಿಜಯ್ಕುಮಾರ್ ವಿರುದ್ಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.