ಭಾನುವಾರ, ಆಗಸ್ಟ್ 1, 2021
21 °C

ಗ್ರಾ.ಪಂ ಕಾರ್ಯದರ್ಶಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ (23) ಅವರು ನಗರದಲ್ಲಿ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ತಾಯಿ ಪುಷ್ಪಲತಾ ಜತೆ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಾಗಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಕಾವ್ಯಾ ಅವರ ತಂದೆ ಒಂದೂವರೆ ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಅನುಕಂಪದ ಆಧಾರದಲ್ಲಿ ಕಾವ್ಯಾ ಅವರನ್ನು ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಕಚೇರಿಯಿಂದ ಮನೆಗೆ ಮರಳಿದ ಕಾವ್ಯಾ ಅವರು ತಾಯಿಯನ್ನು ಬೋಂಡಾ ತರಲು ಅಂಗಡಿಗೆ ಕಳುಹಿಸಿದ್ದರು. ತಾಯಿಯು ಅಂಗಡಿಯಿಂದ ಮನೆಗೆ ಮರಳುವಷ್ಟರಲ್ಲಿ ಕಾವ್ಯಾ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಿಲ್ಲ. ಕಾವ್ಯಾ ಅವರ ಅಕ್ಕ ಸಹ ಕೆಲ ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು