ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಪು: ಜೆಡಿಎಸ್ ಬೆಂಬಲಿಗರ ಮೇಲುಗೈ

Published 9 ಆಗಸ್ಟ್ 2023, 13:27 IST
Last Updated 9 ಆಗಸ್ಟ್ 2023, 13:27 IST
ಅಕ್ಷರ ಗಾತ್ರ

ಶ್ರೀನಿವಾಸಪು: ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಹಾಗೂ ಉಪಾಧ್ಯಕ್ಷೆಯಾಗಿ ಸಲ್ಮಾ ಖಾನಂ ಆಯ್ಕೆಯಾಗಿದ್ದಾರೆ.

15 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ನೇತ್ರಾವತಿ 9 ಮತ ಪಡೆದು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ರೆಡ್ಡಪ್ಪ 6 ಮತ ಪಡೆದಿದ್ದಾರೆ. ಸಲ್ಮಾ ಖಾನಂ 8 ಮತ ಪಡೆದು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಮಮತ 7 ಮತ ಪಡೆದಿದ್ದಾರೆ.

ಚುನಾವಣಾಧಿಕಾರಿಯಾಗಿ ಕೃಷ್ಣಪ್ಪ, ಪಿಡಿಒ ಶ್ರೀನಿವಾಸರೆಡ್ಡಿ ಕರ್ತವ್ಯ ನಿರ್ವಹಿಸಿದರು. ಮುಖಂಡ ಬಜ್ಜನ್ನ, ಸುಧಾಕರ್, ಶ್ರೀನಿವಾಸರೆಡ್ಡಿ, ಆನಂದ್, ಕೆ.ಬಿ.ರಘುನಾಥರೆಡ್ಡಿ, ಎಂ.ವಿ.ಮಂಜುನಾಥ ಪ್ರಸಾದ್ ಇದ್ದರು.

ಕೋಡಿಪಲ್ಲಿ ಗ್ರಾ.ಪಂ: ತಾಲ್ಲೂಕಿನ ಕೋಡಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೆಡ್ಡಮ್ಮ ಹಾಗೂ ಉಪಾಧ್ಯಕ್ಷರಾಗಿ ಮುನಿಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT